– ವ್ಯಂಗ್ಯ ಕಾರ್ಟೂನ್ ಹಂಚಿಕೊಂಡ ಸ್ವಾಮಿ
ನವದೆಹಲಿ: ಹೊಸ ಸಂಸತ್ ಭವನಕ್ಕೆ ಶಂಕು ಸ್ಥಾಪನೆಗೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಪೆಟ್ರೋಲ್ ಬೆಲೆ ಏರಿಕೆ ಮತ್ತು ಸಂಸತ್ ಭವನ ಉದ್ಘಾಟನೆಯ ಸಂಬಂಧದ ಕಾರ್ಟೂನ್ ಹಂಚಿಕೊಂಡಿರುವ ಸುಬ್ರಮಣಿಯನ್ ಸ್ವಾಮಿ ತಮ್ಮದೇ ಸರ್ಕಾರದ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ.
ಕಾರ್ಟೂನ್ ನಲ್ಲಿ ಏನಿದೆ?: ಸಾರ್ವಜನಿಕರೊಬ್ಬರು ಪೆಟ್ರೋಲ್ ಬೆಲೆಯಲ್ಲಿ ಏಕೆ ಏರಿಕೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗೆ ಪ್ರಧಾನಿ ಮೋದಿ ನಿಂತ ನೀತಿ ಆಯೋಗ, ಟ್ಯಾಕ್ಸ್ ಇಲ್ಲದೇ ದೇಶ ಹೇಗೆ ನಡೆಸುವುದು ಎಂದು ಪ್ರಶ್ನಿಸಿದ್ದಾರೆ. ಮತ್ತೊಂದು ಕಾರ್ಟೂನ್ ನಲ್ಲಿ ಸರ್ಕಾರಕ್ಕೆ ಹಣದ ಕೊರತೆ ಇದ್ರೆ ಹೊಸ ಸಂಸತ್ ಭವನ ಮಾಡ್ತಿರೋದು ಯಾಕೆ ಎಂದು ವ್ಯಕ್ತಿ ಪ್ರಶ್ನೆ ಮಾಡಿದ್ದಾನೆ.
— Subramanian Swamy (@Swamy39) December 10, 2020
ಎರಡು ದಿನಗಳ ಹಿಂದೆಪೆಟ್ರೋಲ್ ಬೆಲೆ ಏರಿಕೆ ವಿಚಾರವಾಗಿ ಸುಬ್ರಮಣಿಯನ್ ಸ್ವಾಮಿ ಕಿಡಿಕಾರಿದ್ದಾದ್ದರು. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90 ರೂ.ಗೆ ಮಾರಾಟ ಮಾಡುವುದು ಭಾರತ ಸರ್ಕಾರ ಜನರ ಮೇಲೆ ಮಾಡುತ್ತಿರುವ ಶೋಷಣೆ. ಪೆಟ್ರೋಲ್ ರಿಫೈನರಿಗಳಲ್ಲಿ ಪ್ರತಿ ಲೀಟರ್ ಬೆಲೆ 30 ರೂ. ಆಗುತ್ತದೆ. ತೆರಿಗೆ ಮತ್ತು ಪೆಟ್ರೋಲ್ ಪಂಪ್‍ಗಳ ಕಮಿಷನ್‍ನಿಂದಾಗಿ ಉಳಿದ 60 ರೂ. ಹೆಚ್ಚಳವಾಗುತ್ತದೆ. ನನ್ನ ದೃಷ್ಟಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಅನ್ನು ಗರಿಷ್ಟ 40 ರೂ.ಗೆ ಮಾರಾಟ ಮಾಡಬೇಕು ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಸರ್ಕಾರಗಳ ನಿಲುವು ಏನು?