– ಫೋನಿನಲ್ಲಿ ಹೇಳಿದ್ದನ್ನ ನಂಬಿ ಹೋಗಿದ್ದೆ ತಪ್ಪಾಯ್ತು
ಚಂಡೀಗಢ: ಮಹಿಳೆಯೊಬ್ಬರ ಮೇಲೆ ಹೋಟೆಲಿನಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಂಜಾಬ್‍ನ ಅಮೃತಸರ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಸಂತ್ರಸ್ತೆ ಮತ್ತು ಆಕೆಯ 10 ವರ್ಷದ ಮಗಳನ್ನು ಚಲಿಸುತ್ತಿದ್ದ ಕಾರಿನಿಂದ ಹೊರಗೆ ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 6 ರಂದು ಅಪರಿಚಿತ ವ್ಯಕ್ತಿಯೊಬ್ಬ ಸಂತ್ರಸ್ತೆಗೆ ಫೋನ್ ಮಾಡಿದ್ದು, ನಿಮ್ಮ ಸಹೋದ್ಯೋಗಿಗೆ ಅಪಘಾತವಾಗಿದೆ ಎಂದು ತಿಳಿಸಿದ್ದಾನೆ. ಇದರಿಂದ ಗಾಬರಿಗೊಂಡು ಸಂತ್ರಸ್ತೆ ಬಸ್ ಮೂಲಕ ಅಮೃತಸರಕ್ಕೆ ಹೋಗಿದ್ದಾರೆ.
ಅಮೃತಸರವನ್ನು ತಲುಪಿದ ನಂತರ ಫೋನ್ ಮಾಡಿದ್ದ ಅಪರಿಚಿತ ವ್ಯಕ್ತಿ ನನ್ನನ್ನು ಭೇಟಿಯಾದನು. ಈ ವೇಳೆ ನನಗೆ ಮತ್ತು ಬರುವ ಔಷಧಿ ಮಿಕ್ಸ್ ಮಾಡಿದ್ದ ಪಾನೀಯವನ್ನು ಕೊಟ್ಟಿದ್ದಾನೆ. ಅದನ್ನು ಕುಡಿದ ನಂತರ ನಾನು ಪ್ರಜ್ಞಾಹೀನ ಕಳೆದುಕೊಂಡೆ. ಆಗ ನನ್ನ ಮಗಳೊಂದಿಗೆ ಕಾರಿನಲ್ಲಿ ಹೋಟೆಲ್‍ಗೆ ಕರೆದುಕೊಂಡು ಹೋಗಿದ್ದಾನೆ. ಕಾರಿನಲ್ಲಿ ಇಬ್ಬರು ಪುರುಷರಿದ್ದರು ಎಂದು ಸಂತ್ರಸ್ತೆ ಹೇಳಿದ್ದಾರೆ.
ಹೋಟೆಲಿನಲ್ಲಿ ಸಂತ್ರಸ್ತೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆರೋಪಿಗಳು ಸಂತ್ರಸ್ತೆ ಮತ್ತು ಆಕೆಯ ಮಗಳನ್ನು ಚಲಿಸುವ ಕಾರಿನಿಂದ ಹೊರಗೆ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ ನನಗೆ ಮತ್ತು ತನ್ನ ಮಗಳಿಗೆ ಗಾಯಗಳಾಗಿವೆ. ಅಂದು ನಾನು ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿಲ್ಲ ಎಂದು ಮಹಿಳೆ ತಿಳಿಸಿದ್ದಾರೆ.
ಇದೀಗ ಸಂತ್ರಸ್ತೆ ಧೈರ್ಯ ಮಾಡಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೇ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ಸಂತ್ರಸ್ತೆಯನ್ನು ಕರೆದುಕೊಂಡು ಹೋದ ಮತ್ತು ಅತ್ಯಾಚಾರ ಮಾಡಿದ ಹೋಟೆಲ್ ದಾಖಲೆಗಳು ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.