ಮಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಒಂದು ವರ್ಷ ವಿದ್ಯಾಸಂಸ್ಥೆಯನ್ನು ಸಂಪೂರ್ಣ ಬಂದ್ ಮಾಡಲು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ.
ಧರ್ಮಸ್ಥಳ – ಉಜಿರೆ ಮಧ್ಯೆ ಇರುವ ಕನ್ಯಾಡಿಯ ಈ ಶಾಲೆಯಲ್ಲಿ ಸುಮಾರು 350ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
Advertisement
Advertisement
ಎಲ್ ಕೆಜಿಯಿಂದ ಹತ್ತನೇ ತರಗತಿವರೆಗೆ ಶಾಲೆ ನಡೆಯುತ್ತಿದ್ದು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಂಸ್ಥೆ ಅಧ್ಯಕ್ಷ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.
Advertisement
350 ಮಕ್ಕಳ ಪೈಕಿ 250ರಷ್ಟು ಮಕ್ಕಳು 12ವರ್ಷದೊಳಗಿನವರು. ಹೀಗಾಗಿ ಮಕ್ಕಳ ಪೋಷಕರ ಅಭಿಪ್ರಾಯ ಪಡೆದು ಶಾಲಾ ಆಡಳಿತ ನಿರ್ಧಾರ ಕೈಗೊಂಡಿದೆ. ಪೋಷಕರು ಬೇರೆ ಶಾಲೆಗೆ ಸೇರಲು ಇಚ್ಛಿಸಿದರೆ ವರ್ಗಾವಣೆ ಪತ್ರ ನೀಡಲು ನಿರ್ಧರಿಸಿದ್ದೇವೆ. ಶಾಲೆಯ ಈ ನಿರ್ಧಾರದ ಬಗ್ಗೆ ಶಿಕ್ಷಣ ಸಚಿವರಿಗೆ, ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದ್ದೇವೆ ಎಂದು ಬ್ರಹ್ಮಾನಂದ ಸರಸ್ವತಿ ತಿಳಿಸಿದ್ದಾರೆ.