ಬೆಂಗಳೂರು: ಇನ್ನೂ ಒಂದು ತಿಂಗಳು ಆದ ಬಳಿಕ ಆ ತಾಯಿ ಇನ್ನೇನು ಬಿಡುಗಡೆ ಮಾಡುತ್ತಾಳೋ ನೋಡೋಣ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಡಿ ಲೇಡಿಯ 3ನೇ ವೀಡಿಯೋ ಹೇಳಿಕೆ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಕರಣ ಆಗಿ ಎಷ್ಟು ದಿನ ಆಯ್ತು. ಒಂದು ತಿಂಗಳು ಆದ ಮೇಲೆ ಬಿಡುಗಡೆಯಾಗಿದೆ. ಇನ್ನೂ ಒಂದು ತಿಂಗಳು ಆದ ಮೇಲೆ ಆ ತಾಯಿ ಇನ್ನೇನು ಬಿಡುಗಡೆ ಮಾಡ್ತಾಳೆ ನೋಡೋಣ ಎಂದು ಹೇಳಿದ್ದಾರೆ.
Advertisement
Advertisement
ಈಗ ಎಸ್‍ಐಟಿ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಮಾತನಾಡೋದು ಸರಿಯಲ್ಲ. ಈ ಬಗ್ಗೆ ಮಾತಾಡಿದ್ರೆ ಹಿಂಟ್ ಬಿಟ್ಟು ಕೊಟ್ಟ ಹಾಗೆ ಆಗುತ್ತೆ. ತನಿಖೆ ಮುಗಿಯೋವರೆಗೂ ಈ ಬಗ್ಗೆ ಮಾತನಾಡದೇ ಇರೋದು ಉತ್ತಮ ಎಂದರು.
Advertisement
ಮಾಜಿ ಸಚಿವ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಇಂದು ತನ್ನ ಮೂರನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ, ಕರ್ನಾಟಕದ ಜನತೆ, ತಂದೆ-ತಾಯಿಯರ ಆಶೀರ್ವಾದ, ಎಲ್ಲಾ ಪಕ್ಷದ ನಾಯಕರು ಹಾಗೂ ಎಲ್ಲಾ ಸಂಘಟನೆಯವರಿಂದ ನನಗೆ ತುಂಬಾನೇ ಬೆಂಬಲ ಸಿಗುತ್ತಿದೆ ಎಂದು ತಿಳಿಸಿದ್ದಾರೆ.
Advertisement
24 ದಿನದಿಂದ ನಾನು ಜೀವ ಭಯದಲ್ಲಿ ಬೆದರಿಕೆಗಳಿಂದ ಭಯ ಭಯದಲ್ಲಿ ಬದುಕ್ತಾ ಇದ್ದೇನೆ. ಆದರೆ ಇಂದು ಎಲ್ಲೋ ಕಡೆಯಿಂದ ಒಂದು ಧೈರ್ಯ ಬಂದಿದೆ. ಆ ಧೈರ್ಯ ಬಂದಿರೋದಕ್ಕೆ ಹಾಗೂ ನನ್ನನ್ನು ಎಲ್ಲರೂ ಬೆಂಬಲಿಸುತ್ತಾ ಇದ್ದೀರಾ ಅನ್ನೋ ಕಾರಣಕ್ಕೆ ಇಂದು ನಾನು ನನ್ನ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ಬೆನ್ನಲ್ಲೇ ಯುವತಿ ಪರ ವಕೀಲ ಜಗದೀಶ್ ಮಾತಾಡಿ, ಇಂದು ಮಧ್ಯಾಹ್ನ 2.30ಕ್ಕೆ ಪೊಲೀಸ್ ಸಮಿಷನರ್ ಅವರಿಗೆ ಯುವತಿಯ ಲಿಖಿತ ದೂರನ್ನು ನೀಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.