– ನಾಳೆ ನಡೆಯಲಿದೆ ಮಹತ್ವದ ಸಭೆ
ಬೆಂಗಳೂರು: ಕರ್ನಾಟಕದಲ್ಲಿ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆಯೇ ಇಲ್ಲದೇ ಉತ್ತೀರ್ಣಗೊಳಿಸುವ ಸಂಬಂಧ ಸೋಮವಾರ ಮಹತ್ವದ ಸಭೆ ನಡೆಯಲಿದೆ.
ಕೋವಿಡ್ 19 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ 6 ರಿಂದ 9ನೇ ತರಗತಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ನಡುವೆ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆಯೇ ಇಲ್ಲದೇ ಉತ್ತೀರ್ಣಗೊಳಿಸುವ ಬಗ್ಗೆ ಪರ, ವಿರೋಧದ ಚರ್ಚೆ ಆರಂಭವಾಗಿದೆ.
Advertisement
Advertisement
ಈ ಕಾರಣಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಖಾಸಗಿ ಶಾಲೆಗಳ ಸಂಘಟನೆಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಣ ತಜ್ಞರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Advertisement
1 ರಿಂದ 9ನೇ ತರಗತಿವರೆಗೆ ಮೌಲ್ಯಾಂಕನ ಪರೀಕ್ಷೆಗೆ ಅನುಮತಿ ಕೋರಿ ಈಗಾಗಲೇ ಖಾಸಗಿ ಶಾಲೆಗಳು ಶಿಕ್ಷಣ ಇಲಾಖೆಗೆ ಪತ್ರ ಬರೆದಿವೆ. ಇತ್ತ ತರಗತಿಗಳು ಸರಿಯಾಗಿ ನಡೆಯದೇ ಇರುವ ಹಿನ್ನೆಲೆಯಲ್ಲಿ ಪರೀಕ್ಷೆ ಬೇಡ ಎಂಬ ವಾದವೂ ಜೋರಾಗಿದೆ. ಈ ಎಲ್ಲ ಗೊಂದಲಗಳಿಗೆ ನಾಳೆ ತೆರೆಬೀಳುವ ನಿರೀಕ್ಷೆ ಇದೆ.