ನವದೆಹಲಿ: ದೇಶದಲ್ಲಿ ಕೋವಿಡ್ 19 ಅಟ್ಟಹಾಸ ಮುಂದುವರೆದಿದೆ. ಕಳೆದ ಎರಡು ದಿನಗಳಿಂದ ಐದೈದು ಸಾವಿರ ಕೊರೋನಾ ಕೇಸ್‍ಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಂತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ದಾಖಲೆ ಮಟ್ಟದಲ್ಲಿ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಬರೋಬ್ಬರಿ 5,242 ಮಂದಿಗೆ ಬಾಧಿತರಾಗಿದ್ದು, ಮಹಾರಾಷ್ಟ್ರದಲ್ಲಿ 2,347 ಮಂದಿಗೆ ಸೋಂಕು ಬಂದಿದೆ.
Advertisement
Advertisement
24 ಗಂಟೆಯಲ್ಲಿ 157 ಮಂದಿ ಕೊರೋನಾಗೆ ಬಲಿ ಆಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಸಾವುಗಳ ಸಂಖ್ಯೆ 3 ಸಾವಿರ ದಾಟಿದೆ. ಒಟ್ಟು ಪ್ರಕರಣಗಳ ಪೈಕಿ ಈ ಪೈಕಿ 65 ಸಾವಿರ ಕೇಸ್‍ಗಳು ಮಹಾರಾಷ್ಟ್ರ, ದೆಹಲಿ, ಗುಜರಾತ್, ತಮಿಳುನಾಡಿನಿಂದಲೇ ವರದಿ ಆಗಿವೆ. 39 ಸಾವಿರಕ್ಕೂ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ.
Advertisement
ಉತ್ತರ ಪ್ರದೇಶಕ್ಕೆ ವಾಪಸ್ಸಾದ 414 ವಲಸೆ ಕಾರ್ಮಿಕರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮಧ್ಯೆ, ಕಳೆದ 14 ದಿನಗಳಲ್ಲಿ ವಿದೇಶಗಳಿಂದ ಬಂದ ಎಲ್ಲರಿಗೂ ಕೊರೊನಾ ಪರೀಕ್ಷೆ ಮಾಡಬೇಕೆಂದು ಐಸಿಎಂಆರ್ ಸೂಚನೆ ನೀಡಿದೆ.
Advertisement
1 ಲಕ್ಷ ಸೋಂಕಿತರು ಇರುವ ದೇಶಗಳ ಪಟ್ಟಿಯಲ್ಲಿ ಭಾರತ 11ನೇ ಸ್ಥಾನದಲ್ಲಿದೆ. ಅಮೆರಿಕ, ರಷ್ಯಾ, ಸ್ಪೇನ್, ಇಂಗ್ಲೆಂಡ್,ಬ್ರೆಜಿಲ್, ಇಟಲಿ, ಜರ್ಮನಿ, ಟರ್ಕಿ, ಫ್ರಾನ್ಸ್, ಇರಾನ್ ಬಳಿಕ ಭಾರತ ಸ್ಥಾನವನ್ನು ಪಡೆದುಕೊಂಡಿದೆ.