ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾಗ ಪ್ರಭಾವಿ ವ್ಯಕ್ತಿಗಳಿಂದ ಹಣ ಪಡೆದಿರುವುದಾಗಿ ಬಿಜೆಪಿ ಮುಖಂಡ (BJP Leader) ಎನ್.ಆರ್ ರಮೇಶ್ (NR Ramesh) ಆರೋಪಿಸಿದ್ದಾರೆ.
ನಗರದಲ್ಲಿಂದು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸೋಮವಾರ ಲೋಕಾಯುಕ್ತಕ್ಕೆ (Karnataka Lokayukta) ದೂರು ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವೀಕೆಂಡ್ ಪಂಚಾಯಿತಿಯಲ್ಲಿ ಸಾನ್ಯಗೆ ಸುದೀಪ್ ಖಡಕ್ ಕ್ಲಾಸ್
Advertisement
Advertisement
ಸಿದ್ದರಾಮಯ್ಯ ಸಿಎಂ ಆದ ವೇಳೆ ಪ್ರಭಾವಿ ವ್ಯಕ್ತಿಯಿಂದ ಹಣ ಪಡೆದಿದ್ದಾರೆ. ಕಿಂಗ್ಸ್ ಕೋರ್ಟ್‌ನ ಎಲ್.ವಿವೇಕಾನಂದ ಅವರಿಂದ 1.30 ಕೋಟಿ ಚೆಕ್ ಮೂಲಕ ಹಣ ಪಡೆದಿದ್ದಾರೆ ಎಂದು ಆರೋಪಿಸಿ ದಾಖಲೆ ಬಿಡುಗಡೆ ಮಾಡಿದ್ದಾರೆ.
Advertisement
ಬೆಂಗಳೂರು ಟರ್ಫ್ ಕ್ಲಬ್ (Bangalore Turf Club) ಉತ್ಸುವಾರಿ ಹುದ್ದೆಗೆ 2014 ರಲ್ಲಿ ವಿವೇಕಾನಂದ ಅವರನ್ನ ನೇಮಕ ಮಾಡಲಾಗಿತ್ತು. ಅವರನ್ನ 3 ವರ್ಷದ ಅವಧಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಅಲ್ಲದೇ ಲೋಕಾಯುಕ್ತ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (Election Commission) ವಿವೇಕಾನಂದ ಅವರಿಂದ ಸಾಲ ಪಡೆದಿರೋದಾಗಿ ಸುಳ್ಳು ಮಾಹಿತಿ ನೀಡಿದ್ದರು ಎಂದು ದೂರಿದ್ದಾರೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್ – ಕಣ್ಣೂರು ಶ್ರೀ, ಯುವತಿ ಅರೆಸ್ಟ್
Advertisement
ಕೇಂದ್ರ ಗೃಹ ಇಲಾಖೆ ನಿಯಮದ ಪ್ರಕಾರ ಹುದ್ದೆ ನೀಡಿ ಉಡುಗೊರೆ (Gift), ಚೆಕ್ ಪಡೆಯುವಂತಿಲ್ಲ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಾಲಂ 7, 8, 9, 10, 13ರ ಅಡಿಯಲ್ಲಿ ಹಣ ಪಡೆಯುವುದು ಶಿಕ್ಷಾರ್ಹ ಅಪರಾಧವಾಗಿದೆ. ಹಾಗಾಗಿ ಈ ಬಗ್ಗೆ ನಾಳೆ ಲೋಕಾಯುಕ್ತಕ್ಕೆ (Karnataka Lokayukta) ದೂರು ನೀಡಲಿದ್ದೇನೆ. ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ವಂಚನೆ ಪ್ರಕರಣ ದಾಖಲಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ಈ ಬಗ್ಗೆ ಸಿಬಿಐ, ಸಿಐಡಿ, ನ್ಯಾಯಾಂಗ ತನಿಖೆಯಾಗಬೇಕು. ಈಗಾಗಲೇ ಸಿಎಂ ಗಮನಕ್ಕೆ ಈಗಾಗಲೇ ತರಲಾಗಿದೆ. ಸಿಎಂ ಈ ಬಗ್ಗೆ ಸೂಕ್ತ ತನಿಖೆಗೆ ವಹಿಸೋ ನಂಬಿಕೆ ಇದೆ ಎಂದು ಹೇಳಿದ್ದಾರೆ.