ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಬ್ಯಾರೇಜ್ ನಿಂದ ಭೀಮಾ ನದಿಗೆ 1 ಲಕ್ಷದ 43 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಪರಿಣಾಮ ಜೇವರ್ಗಿಯ ಮಂದೇವಾಲ ಮತ್ತು ಅಫಜಲಪುರದ ಚೌಡಾಪುರ ರಸ್ತೆ ಸಂಚಾರ ಸಂಪೂರ್ಣ ಕಡಿತವಾಗಿದೆ.
ಜಲಾಶಯದ ಒಳಹರಿವು 1,43,700 ಕ್ಯೂಸೆಕ್ ಇದ್ದರೆ ಹೊರಹರಿವು 1,43,700 ಕ್ಯೂಸೆಕ್ ಇದೆ. ಜಲಾಶಯದ ನೀರಿನ ಮಟ್ಟ 406 ಮೀ. ಇದೆ. ನದಿಯ ಅಕ್ಕ-ಪಕ್ಕದ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ಹೋಗಿ ಕಬ್ಬು ಸೇರಿದಂತೆ ಇತರೆ ಬೆಳೆಗಳು ನದಿಯಲ್ಲಿ ಕೊಚ್ಚಿ ಹೋಗಿವೆ. ಜಮೀನುಗಳಿಗೆ ನುಗ್ಗುತ್ತಿರುವ ಭೀಮಾನದಿ ಪ್ರವಾಹದ ನೀರು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಹಾಗಾಗಿ ರೈತರಲ್ಲಿ ಆತಂಕ ಮೂಡಿಸಿದೆ.
Advertisement
ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.