ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ನದಿಗೆ

Public TV
1 Min Read
Tungabhadra Dam 1

– ಕೆಆರ್‌ಎಸ್‌ ಹೊರಹರಿವಿನ ಪ್ರಮಾಣ 1 ಲಕ್ಷ ಕ್ಯುಸೆಕ್‌ಗೆ ಇಳಿಕೆ – ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ

ಕೊಪ್ಪಳ/ಮಂಡ್ಯ: ನಿರಂತರ ಮಳೆಯಾಗುತ್ತಿರುವ‌ ಹಿನ್ನೆಲೆಯಲ್ಲಿ ತುಂಗಭದ್ರಾ ಡ್ಯಾಂನಿಂದ (Tungabhadra Dam) 1.58 ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿ ತಿಳಿಸಿದೆ.

ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಜಲಾಶಯದಿಂದ ಭಾರೀ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ, ವರದಾ ನದಿಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಇದನ್ನೂ ಓದಿ: Wayanad Landslide | ಒಂದೇ ಕುಟುಂಬದ 9 ಜನ ಕನ್ನಡಿಗರು ನಾಪತ್ತೆ – ಕಣ್ಣೀರಿಟ್ಟ ಸಂಬಂಧಿಕ

TB Dam Water Tungabhadra Dam

ಸದ್ಯ 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 97.945 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

KRS 3

ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ:
ಕಳೆದ ರಾತ್ರಿ ಕೆಆರ್‌ಎಸ್ ಅಣೆಕಟ್ಟೆಯಿಂದ 1.72 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿದ್ದ ಪರಿಣಾಮ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನಕ್ಕೆ ಜಲದಿಗ್ಭಂಧನವಾಗಿತ್ತು. ಸದ್ಯ ಕೆಆರ್‌ಎಸ್ ಜಲಾಶಯದಿಂದ ಹೊರಹರಿವಿನ ಪ್ರಮಾಣ 1 ಲಕ್ಷ ಕ್ಯುಸೆಕ್‌ಗೆ ಇಳಿಕೆ ಮಾಡಿರುವುದರಿಂದ ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ ಬಂದಿದೆ. ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಡಿಕೆಶಿ – ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ

Share This Article