ಚಿಕ್ಕಬಳ್ಳಾಪುರ: ಕರ್ನಾಟಕ-ಆಂಧ್ರ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ 7ರ ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕ ಕಚೇರಿಯಲ್ಲಿ ಇದ್ದ 1.75 ಕೋಟಿ ರೂ. ಹಣವನ್ನ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಆಂಧ್ರದ ಅನಂತಪುರ ಎಸ್ಪಿ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಎಸ್ಪಿ ಸ್ಥಳೀಯ ಬಾಗೇಪಲ್ಲಿ ಪೊಲೀಸರು ಸುಂಕ ವಸೂಲಾತಿ ಕೇಂದ್ರದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಭಾರೀ ಮೊತ್ತದ ಹಣ ಪತ್ತೆಯಾದ ಹಿನ್ನೆಲೆ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಚುನಾವಣಾಧಿಕಾರಿಗಳು ಐಟಿ ಇಲಾಖಾಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಬಂದ ಐಟಿ ಅಧಿಕಾರಿಗಳು ಹಣ ಪರಿಶೀಲನೆ ನಡೆಸಿದ್ದು ಸಬಂಧಪಟ್ಟ ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕ ಸೂಕ್ತ ದಾಖಲಾತಿಗಳನ್ನು ಓದಗಿಸುವಲ್ಲಿ ವಿಫಲರಾಗಿದ್ದಾರೆ.
ಕಳೆದ 20 ದಿನಗಳಿಂದ ಸುಂಕ ವಸೂಲಾತಿ ಕೇಂದ್ರದಲ್ಲಿ ವಸೂಲಿ ಆದ ಹಣ ಎಂದು ಹೇಳಿದ್ದು, ಆದರೆ ಇದರ ಬಗ್ಗೆ ಸೂಕ್ತ ದಾಖಲಾತಿಗಳಿಲ್ಲದ ಕಾರಣ ಚುನಾವಣಾ ಅಧಿಕಾರಿಗಳು ಎಲ್ಲಾ ಹಣವನ್ನ ಜಪ್ತಿ ಮಾಡಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.