ಲಕ್ನೋ: ಹೋಳಿ ಸಂಭ್ರಮಾಚರಣೆ (Holi) ವೇಳೆ ಮುಸ್ಲಿಂ ಮಹಿಳೆಗೆ (Muslim Women) ಕಿರುಕುಳ ನೀಡಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ (Uttar Pradesh) ಬಿಜ್ನೋರ್‌ನ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಮುಸ್ಲಿಂ ದಂಪತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಸ್ಥಳದಲ್ಲೇ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದ ಗುಂಪೊಂದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದಿದ್ದಾರೆ. ಅಲ್ಲದೇ ಪೈಪ್ ಮೂಲಕ ಮಹಿಳೆ ಮೇಲೆ ನೀರು ಹಾರಿಸಿದ್ದಾರೆ. ಇದಕ್ಕೆ ಮಹಿಳೆ ವಿರೋಧಿಸಿದರೂ ಗುಂಪು ಕಿರುಕುಳ ನೀಡುವುದನ್ನು ನಿಲ್ಲಿಸಲಿಲ್ಲ. ಮುಸ್ಲಿಂ ಮಹಿಳೆ ಮುಖಕ್ಕೆ ಬಲವಂತವಾಗಿ ಬಣ್ಣ ಬಳಿದಿದ್ದಾರೆ. ಈ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಇಳಿದ ಜಾಗಕ್ಕೆ ‘ಶಿವ ಶಕ್ತಿ’ ಎಂದು ನಾಮಕರಣ – ಐಎಯು ಅನುಮೋದನೆ
Advertisement
Advertisement
ಮಹಿಳೆ ಇದಕ್ಕೆ ವಿರೋಧಿಸಿದ್ದಕ್ಕೆ, ‘ಇದು 70 ವರ್ಷಗಳ ಹಿಂದಿನ ಸಂಪ್ರದಾಯ’ ಎಂದು ಗುಂಪು ಹೇಳಿದೆ. ಕೊನೆಗೆ ಗುಂಪಿನಿಂದ ತಪ್ಪಿಸಿಕೊಳ್ಳಲು ಮುಸ್ಲಿಂ ವ್ಯಕ್ತಿ ವೇಗವಾಗಿ ಬೈಕ್ ಚಲಾಯಿಸುತ್ತಾರೆ. ಅವರ ಮುಂದೆ ಹೋಗುತ್ತಿದ್ದಂತೆ, ಹುಡುಗರ ಗುಂಪು ಧಾರ್ಮಿಕ ಘೋಷಣೆ ಕೂಗಿರುವ ದೃಶ್ಯವೂ ವೀಡಿಯೋದಲ್ಲಿದೆ.
Advertisement
ವಿಡಿಯೋ ವೈರಲ್ ಆದ ಕೂಡಲೇ ಬಿಜ್ನೋರ್ ಪೊಲೀಸ್ ಮುಖ್ಯಸ್ಥ ನೀರಜ್ ಕುಮಾರ್ ಜದೌನ್, ಸ್ಥಳೀಯ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಧಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ವೈರಲ್ ವಿಡಿಯೋವನ್ನು ಸ್ಕ್ಯಾನ್ ಮಾಡಿ ಅದರಲ್ಲಿ ಭಾಗಿಯಾದವರನ್ನು ಗುರುತಿಸಿದ್ದಾರೆ. ಇದನ್ನೂ ಓದಿ: ಐಟಿ, ಇಡಿ, ಸಿಬಿಐ ದಾಳಿಗೆ ಹೆದರಿ ಬಿಜೆಪಿ ಸೇರ್ತಿದ್ದಾರೆ – ಇದು ಪ್ರಜಾಪ್ರಭುತ್ವದ ಕಗ್ಗೊಲೆ: ಸುಪ್ರಿಯಾ ಸುಳೆ
Advertisement
ಸ್ವಯಂಪ್ರೇರಣೆಯಿಂದ ಮಹಿಳೆಗೆ ನೋವುಂಟು ಮಾಡುವುದು ಮತ್ತು ಹಲ್ಲೆ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸರು ಅನಿರುದ್ಧ್ ಎಂಬಾತನನ್ನು ಬಂಧಿಸಿದ್ದು, ಮೂವರು ಬಾಲಾಪರಾಧಿಗಳನ್ನು ವಶಕ್ಕೆ ಪಡೆದಿದ್ದಾರೆ.