ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಬೆಳ್ಳಿ (Silver) ಆಭರಣಗಳನ್ನು ಜಪ್ತಿ (Seize) ಮಾಡಲಾಗಿದೆ.
ಮಹಾರಾಷ್ಟ್ರ (Maharastra) ಹಾಗೂ ಬೀದರ್ ಗಡಿ ಚೆಕ್ ಪೊಸ್ಟ್ (Bidar Border Check Post) ನಲ್ಲಿ ತಪಾಸಣೆ ವೇಳೆ 142 ಕೆ.ಜಿ ಬೆಳ್ಳಿಯ ಕಾಲು ಚೈನುಗಳು ಸೇರಿ 1 ಕೋಟಿ 5 ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣಗಳ ಜೊತೆಗೆ ಕಾರು ಕೂಡ ಜಪ್ತಿ ಮಾಡಲಾಗಿದೆ.
Advertisement
Advertisement
ಒಟ್ಟು 8 ಬ್ಯಾಗ್ ಗಳಲ್ಲಿ 142 ಕೆಜಿ ಬೆಳ್ಳಿಯ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗಜಾನನ ಎಂಬವರಿಗೆ ಸೇರಿದ ಕಾರಿನಲ್ಲಿ ಅಪಾರ ಪ್ರಮಾಣದ ಬೆಳ್ಳಿಯ ಕಾಲು ಚೈನುಗಳು ಪತ್ತೆಯಾಗಿವೆ. ಇದನ್ನೂ ಓದಿ: ದಾಖಲೆ ಇಲ್ಲದ ಹಣವನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದ ಖತರ್ನಾಕ್ ವ್ಯಕ್ತಿಗಳು!
Advertisement
Advertisement
ಕಾರಿನ ಮಾಲೀಕರು ನಿಖರವಾದ ದಾಖಲೆಗಳು ನೀಡದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.