ಚೆನ್ನೈ: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿ, 38 ಮಂದಿ ಕಟ್ಟಡ ಅವಶೇಷಗಳಡಿ ಸಿಲುಕಿರುವ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನ ಕಂದನ್‍ಚವಡಿ ಎಂಬಲ್ಲಿ ಸಂಭವಿಸಿದೆ.
ಶನಿವಾರ ರಾತ್ರಿ ಕಂದನ್‍ಚವಡಿ ಪ್ರದೇಶದಲ್ಲಿ ನಿರ್ಮಾಣ ಹಂತದ ನಾಲ್ಕಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡ ಕುಸಿತದಿಂದಾಗಿ ಸ್ಥಳದಲ್ಲೇ ಓರ್ವ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದು, 38 ಮಂದಿ ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ.
Advertisement
From our end search has concluded. 1 dead body was recovered. 61 personnel were part of this operation: Vinoj, Assistant Commandant, NDRF on building collapse in Chennai's Kandanchavadi area #TamilNadu pic.twitter.com/bsBbiGHhsW
— ANI (@ANI) July 22, 2018
Advertisement
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ರಕ್ಷಣಾ ಪಡೆಗಳು ತಡರಾತ್ರಿ ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆಯಲ್ಲಿ ಸುಮಾರು 28 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕೂಲಿ ಕಾರ್ಮಿಕರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ರಕ್ಷಣಾ ಕಾರ್ಯಾ ಭರದಿಂದ ಸಾಗುತ್ತಿದ್ದು, ಜೆಸಿಬಿಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರೆದಿದೆ.
Advertisement
ಘಟನೆ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಡಳಿತ, ಬಹುತೇಕ ಕೂಲಿ ಕಾರ್ಮಿಕರು ದಕ್ಷಿಣ ತಮಿಳುನಾಡು ಪ್ರದೇಶಕ್ಕೆ ಸೇರಿದವರು ಎನ್ನಲಾಗಿದೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಕಟ್ಟಡವು ತಂಜಾವೂರ್ ನ ಆಸ್ಪತ್ರೆಯೊಂದಕ್ಕೆ ಸೇರಿದ್ದಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.