ಗುರುದ್ವಾರದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ – ಭದ್ರತಾ ಸಿಬ್ಬಂದಿ ಸಾವು

Public TV
1 Min Read
BLAST IN KABUL

ಕಾಬೂಲ್: ಅಫ್ಘಾಸ್ತಾನದ ರಾಜಧಾನಿಯಲ್ಲಿರುವ ಕಾರ್ತೆ ಪರ್ವಾನ್ ಗುರುದ್ವಾರದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಸ್ಫೋಟಗಳಿಂದ ಸಾವು ನೋವುಗಳಾಗಿದ್ದು, ಈ ದಾಳಿಯ ಹಿಂದೆ ಐಸಿಸ್ ಖೊರಾಸನ್ ಕೈವಾಡವಿದೆ ಎಂದು ಶಂಕಿಸಲಾಗಿದೆ.

Kabul Bomb Blast (4)

ಮೂಲಗಳ ವರದಿಯ ಪ್ರಕಾರ ಅಪರಿಚಿತ ಶಸ್ತ್ರಾಸ್ತ್ರಧಾರಿಯೊಬ್ಬ ಇಂದು ಮುಂಜಾನೆ ಗುರುದ್ವಾರಕ್ಕೆ ಪ್ರವೇಶಿಸಿದ್ದ ಎನ್ನಲಾಗಿದ್ದು, ಗುರುದ್ವಾರದಲ್ಲಿರುವವರೆಲ್ಲರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗುರುದ್ವಾರದ ದಾಳಿಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಇದರ ಹೊರತಾಗಿ ಸಾವು-ನೋವುಗಳ ಬಗ್ಗೆ ಇನ್ನೂ ದೃಢೀಕೃತ ಮಾಹಿತಿಯಿಲ್ಲ. ಭದ್ರತಾಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ಭಯೋತ್ಪಾದಕರ ವಿರುದ್ಧ ಹೋರಾಟ ಮುಂದುವರಿದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

Kabul Bomb Blast 2

ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಗುರುದ್ವಾರ ಕಾರ್ತೆ ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಅಫ್ಘಾನಿಸ್ತಾನದಲ್ಲಿರುವ ಸಿಖ್ಖರಿಗೆ ಜಾಗತಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದಾರೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಘಟನೆಯ ಬೆಳವಣಿಗೆಗಳ ಬಗ್ಗೆ ಗಮನ ಹರಿಸುತ್ತಿದೆ. ಜೊತೆಗೆ ಕಾರ್ತೆ ಪರ್ವಾನ್‌ನಲ್ಲಿರುವ ಸಿಖ್ಖರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ. ಇದನ್ನೂ ಓದಿ: ಲಾಲೂ ಯಾದವ್ ಪಕ್ಷದ ಬೆಂಬಲದೊಂದಿಗೆ ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್

ಹಿನ್ನೆಲೆ ಏನು?
ಇಸ್ಲಾಮಿಕ್ ಸ್ಟೇಟ್ಸ್ ಭಯೋತ್ಪಾದಕ ಸಂಘಟನೆಯ ಖೊರಾಸನ್ ಪ್ರಾಂತ್ಯದ ಮಾಧ್ಯಮ ವಿಭಾಗವು 2020ರ ಗುರುದ್ವಾರದ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕುವ ವೀಡಿಯೋವನ್ನು ಬಿಡುಗಡೆ ಮಾಡಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. 2020ರ ದಾಳಿಯಲ್ಲಿ ಸುಮಾರು 27 ಸಿಖ್ಖರು ಮೃತಪಟ್ಟಿದ್ದರು, ಹಲವರು ಗಾಯಗೊಂಡಿದ್ದರು. 2021ರಲ್ಲಿ ತಾಲಿಬಾನ್, ಅಫ್ಘಾನಿಸ್ತಾನವನ್ನು ಹಿಡಿತಕ್ಕೆ ತೆಗೆದುಕೊಂಡ ನಂತರ ಸಿಖ್ ಸಮುದಾಯವು ಭಯೋತ್ಪಾದಕ ಸಂಘಟನೆಗಳ ಮಾರಣಾಂತಿಕ ದಾಳಿಗಳಿಂದ ಹೆಚ್ಚು ದುರ್ಬಲವಾಗಿದೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

Live Tv

Share This Article
Leave a Comment

Leave a Reply

Your email address will not be published. Required fields are marked *