ಬೆಳಗಾವಿ: ಹಳೆಯ ವೈಷಮ್ಯ ಹಿನ್ನೆಲೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುಣಕುಪ್ಪಿ ಗ್ರಾಮದ ಮುದುಕಪ್ಪ ಅಂಗಡಿ(25) ಎಂದು ಗುರುತಿಸಲಾಗಿದೆ. ಘರ್ಷಣೆಯಲ್ಲಿ ಗಾಯಗೊಂಡ ಏಳು ಮಂದಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?
ಮಾರಕಾಸ್ತ್ರಗಳಿಂದ ಮನಬಂದಂತೆ ಕ್ರೂರವಾಗಿ ಕೊಚ್ಚಿ ಮುದುಕಪ್ಪ ಅಂಗಡಿಯನ್ನು ಕೊಲೆಮಾಡಲಾಗಿದೆ. ಸದ್ಯ ಘಟನೆಯಲ್ಲಿ ಗಾಯಗೊಂಡ ಏಳು ಮಂದಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಈ ಸಂಬಂಧ ಸದ್ಯ ಮಾರಿಹಾಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೆಣ್ಣು ಮಗು ಜನಿಸಿದ್ದಕ್ಕೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ತಂದೆ