ನವದೆಹಲಿ: ರಸ್ತೆ ಬದಿ ಮಲಗಿದ್ದವರ ಮೇಲೆ ಶಾಲಾ ವಿದ್ಯಾರ್ಥಿಯೊಬ್ಬ ಕಾರು ಹರಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ದೆಹಲಿಯ ಕಶ್ಮೀರಿ ಗೇಟ್ ಬಳಿ ನಡೆದಿದೆ.
ಇಂದು ಬೆಳಿಗ್ಗೆ 5.30ರ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಸೆನ್ಸ್ ಇಲ್ಲದೆ ಕಾರು ಚಾಲನೆ ಮಾಡಿದ ವಿದ್ಯಾರ್ಥಿ ಸೇರಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರು ಚಾಲನೆ ಮಾಡುತ್ತಿದ್ದ ಯುವಕ ತನ್ನ ಮೂವರು ಸಹಪಾಠಿಗಳೊಂದಿಗೆ 12ನೇ ಕ್ಲಾಸ್‍ನ ಪರೀಕ್ಷೆ ಮುಗಿದ ಸಂಭ್ರಮಾಚರಣೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ವಿದ್ಯಾರ್ಥಿ ತನ್ನ ಹುಂಡೈ ಐ20 ಕಾರನ್ನ ಅತೀ ವೇಗವಾಗಿ ಚಾಲನೆ ಮಾಡಿದ್ದು, ನಿಯಂತ್ರಣ ತಪ್ಪಿ ಫುಟ್‍ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿಸಿದ್ದಾನೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನೆ ಬಳಿಕ ವಿದ್ಯಾರ್ಥಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ.