ಟೆಹ್ರಾನ್: ಇರಾನ್‌ನ (Iran) ಬುಶೆಹರ್ ಪರಮಾಣು ಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ (US-Israel) ನಡೆಸಿದ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ದಕ್ಷಿಣ ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಬಳಿ ಶನಿವಾರ ಅಮೆರಿಕ-ಇಸ್ರೇಲ್ ದಾಳಿ ನಡೆಸಿದೆ. ಇದಕ್ಕೂ ಮೊದಲು, ಇರಾನ್‌ನ ನೈಋತ್ಯ ಖುಜೆಸ್ತಾನ್ ಪ್ರಾಂತ್ಯದ ಮಹ್‌ಶಹರ್ ಪೆಟ್ರೋಕೆಮಿಕಲ್ ವಲಯದ ಮೇಲೆ ನಡೆದಿದ್ದ ದಾಳಿಯಲ್ಲಿ ಐವರು ಗಾಯಗೊಂಡಿದ್ದರು. ಇದನ್ನೂ ಓದಿ: ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು
ಒಂದು ತಿಂಗಳ ಹಿಂದೆ ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ನಡೆಸಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಪರಿಣಾಮ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತು. ಯುದ್ಧ ಪಶ್ಚಿಮ ಏಷ್ಯಾದಾದ್ಯಂತ ಹರಡಿದ್ದು, ಜಾಗತಿಕ ಆರ್ಥಿಕತೆ ಮತ್ತು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ.
ಶುಕ್ರವಾರ ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ ಎರಡನೇ ಯುಎಸ್ ವಾಯುಪಡೆಯ ವಿಮಾನ ಅಪಘಾತಕ್ಕೀಡಾಗಿದೆ. ಅಮೆರಿಕದ ಎಫ್-15 ಫೈಟರ್ ಜೆಟ್ ಅನ್ನು ಇರಾನ್ ಹೊಡೆದುರುಳಿಸಿದೆ. ಅದೇ ಸಮಯದಲ್ಲಿ ಎ-10 ವಾರ್ಥಾಗ್ ಹಾರ್ಮುಜ್ ಜಲಸಂಧಿಯ ಬಳಿ ಪತನಗೊಂಡಿತು ಎಂದು ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಲಾಗಿದೆ. ಪೈಲಟ್ ಅನ್ನು ರಕ್ಷಿಸಲಾಗಿದೆ. ಇದನ್ನೂ ಓದಿ: We’re in war – ಅಮೆರಿಕದ ಫೈಟರ್ ಜೆಟ್ ಪತನದ ಬಗ್ಗೆ ಟ್ರಂಪ್ ಫಸ್ಟ್ ರಿಯಾಕ್ಷನ್
ಎಫ್-15 ಜೆಟ್‌ನಲ್ಲಿದ್ದ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಮೆರಿಕದ ಮಿಲಿಟರಿ ವಿಮಾನದ ನಷ್ಟವು ಇರಾನ್ ಜೊತೆಗಿನ ರಾಜತಾಂತ್ರಿಕ ಮಾತುಕತೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

