ಮೈಸೂರು: ಚಾಮರಾಜನಗರ ಮಾರಮ್ಮ ದೇವಿ ದೇವಾಲಯದಲ್ಲಿ ಪ್ರಸಾದ ಸೇವಿಸಿ ಭಕ್ತರು ಸಾವನ್ನಪ್ಪಿದ ಕುಟುಂಬ ಸದಸ್ಯರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ತಿಳಿಸಿದೆ.
ಪ್ರಸಾದ ಸೇವಿಸಿ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಗ್ರಾಮಸ್ಥರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು. ಈ ವೇಳೆ ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಕಟಿಸಿದರು.
Advertisement
Saddened to hear about the death of about ten people after consuming Prasada at a temple in Chamarajanagara district. The government has acted swiftly in shifting the victims to hospitals. Whoever is responsible for the tragedy will not be spared.
— D K Shivakumar, President, KPCC (@KPCCPresident) December 15, 2018
Advertisement
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಘಟನೆ ಫುಡ್ ಪಾಯಿಸನ್ ನಿಂದ ಆಗಿಲ್ಲ, ಪ್ರಸಾದದಲ್ಲಿ ವಿಷ ಹಾಕಿರುವುದು ಖಚಿತ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸರ್ಕಾರದ ವತಿಯಿಂದ ಎಲ್ಲರ ಚಿಕಿತ್ಸೆ ವೆಚ್ಚ ಭರಿಸಲಾಗುತ್ತದೆ. ಅಲ್ಲದೇ ಈ ಘಟನೆಯಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲು ಸಿಎಂ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶ ನೀಡಿದ್ದಾರೆ ಎಂದು ತಿಳಿಸಿದರು.
Advertisement
ಘಟನೆಯಲ್ಲಿ ಅಸ್ವಸ್ಥಗೊಂಡವರು ಇನ್ನು ಭಯದಿಂದ ಹೊರ ಬಂದಿಲ್ಲ. ಐಸಿಯೂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ನರದ ಒಳಭಾಗಕ್ಕೆ ವಿಷ ಸೇರಿರುವ ಕಾರಣ ಇನ್ನು 48 ಗಂಟೆ ಕಾಲ ಅವರಿಗೆ ಚಿಕಿತ್ಸೆ ಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ. ಎಲ್ಲರ ಆರೋಗ್ಯದಲ್ಲಿ ಬಹುಬೇಗ ಗುಣಮುಖವಾಗಲಿ ಎಂದು ದೇವರಲ್ಲಿ ಕೇಳಿಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದರು.
Advertisement
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ವೈಯಕ್ತಿಕ ಕಾರಣಗಳಿಂದ ಇಂತಹ ಕೃತ್ಯ ನಡೆದಿದ್ದರೆ ಶಿಕ್ಷೆ ಆಗಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು. ಮೃತ ಕುಟುಂಬದವರಿಗೆ 1 ಲಕ್ಷ ರೂ. ನೀಡಲಾಗುವುದು. ಈಗಾಗಲೇ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇದಕ್ಕೆ ಕೆಪಿಸಿಸಿ ವತಿಯಿಂದ ನೀಡುವ ಅಲ್ಪ ಪ್ರಮಾಣದ ಸಹಾಯ ಕುಟುಂಬಸ್ಥರಿಗೆ ಬೆನ್ನೆಲುಬು ಆಗಲಿದೆ ಎಂದರು.
ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದೆ. ಅಸ್ವಸ್ಥರಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದೇನೆ ಹಾಗೂ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೇನೆ. pic.twitter.com/FbD3Hwm7MW
— Siddaramaiah (@siddaramaiah) December 15, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv