Bengaluru CityDistrictsKarnatakaLatestMain Post

ಖಾಲಿಯಿರುವ 1 ಲಕ್ಷ ಸರ್ಕಾರಿ ಹುದ್ದೆಗಳು ಈ ವರ್ಷ ಭರ್ತಿ: ಬೊಮ್ಮಾಯಿ

ಬೆಂಗಳೂರು: ಖಾಲಿಯಿರುವ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು(Government Jobs) ಈ ವರ್ಷ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಘೋಷಿಸಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ(Karnataka Rajyotsava) ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ತಾಯಿ ಭುವನೇಶ್ವರಿಗೆ ಪುಷ್ಪನಮನ ಮಾಡಿ, ಧ್ವಜಾರೋಹಣ ನೆರವೇರಿಸಿದರು. ಇದನ್ನೂ ಓದಿ: ನಕ್ಷತ್ರದ ಕಣ್ಣುಗಳಿರುವ ಅಪ್ಪು ದೇವರ ಮಗು ಎಂದು ಹಾಡಿ ಹೊಗಳಿದ ರಜನಿಕಾಂತ್

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡ ನಾಡು ಪುಣ್ಯದ ಬೀಡು, ಕರುನಾಡಲ್ಲಿ ಹುಟ್ಟಬೇಕಾದ ಏಳೇಳು ಜನ್ಮಗಳ ಪುಣ್ಯ ಮಾಡಿರಬೇಕು ಎಂದು ಬಣ್ಣಿಸಿದರು. ಈ ವರ್ಷ ಖಾಲಿಯಿರುವ ಒಂದು ಲಕ್ಷ ಸರ್ಕಾರಿ ಹುದ್ದೆಗಳನ್ನು ತುಂಬುತ್ತೇವೆ ಎಂದು ಘೋಷಿಸಿದರು. ಡಿಸೆಂಬರ್ ಅಧಿವೇಶನದಲ್ಲಿ ಕನ್ನಡ ಕಡ್ಡಾಯ ಬಳಕೆ ಕಾಯ್ದೆಗೆ ಅನುಮೋದನೆ ಪಡೆದು ಜಾರಿ ಮಾಡೋದಾಗಿ ಸಿಎಂ ಪ್ರಕಟಿಸಿದರು

ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ 67 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸಿಎಂ ಬೊಮ್ಮಾಯಿ ಗೌರವಿಸಿದರು. ಮೈಸೂರಿನ ರಾಮಕೃಷ್ಣ ಆಶ್ರಮ, ಇಸ್ರೋ ಮಾಜಿ ಅಧ್ಯಕ್ಷ ಕೆ ಶಿವನ್, ನಿವೃತ್ತ ಐಎಎಸ್ ಅಧಿಕಾರಿ ಮದನ್‍ಗೋಪಾಲ್, ಹಿರಿಯ ನಟರಾದ ದತ್ತಣ್ಣ, ಅವಿನಾಶ್, ಸಿಹಿಕಹಿ ಚಂದ್ರು, ಸಾಹಿತಿ ಅ.ರಾ. ಮಿತ್ರ ಸೇರಿ 67 ಗಣ್ಯರು ಪ್ರಶಸ್ತಿಗೆ ಭಾಜನರಾದರು.

Live Tv

Leave a Reply

Your email address will not be published. Required fields are marked *

Back to top button