ರೇಣುಕಾಸ್ವಾಮಿ ಹತ್ಯೆಯಾಗಿ 1 ತಿಂಗಳು- ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ

Public TV
1 Min Read
RENUKASWAMY 1

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ.

ಮುಂದಿನ 45 ದಿನಗಳ ಒಳಗಾಗಿ ಚಾರ್ಜ್‍ಶೀಟ್ ಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Darshan 4 1

ಹತ್ಯೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾಗೌಡ (Pavithra Gowda) ಸೇರಿ 17 ಮಂದಿ ಜೈಲುಪಾಲಾಗಿದ್ದಾರೆ. ತಿಂಗಳಿಂದ ಪೊಲೀಸರ ತನಿಖೆ, 200ಕ್ಕೂ ಅಧಿಕ ಸಾಕ್ಷ್ಯ ಸಂಗ್ರಹ ಕಾರ್ಯ ನಡೆದಿದೆ. ಆರೋಪಿಗಳ ಮೊಬೈಲ್ ರಿಟ್ರೀವ್‍ಗೆ ರವಾನೆ, ವರದಿ ಬರಬೇಕು. ಇನ್ನುಳಿದಂತೆ ಕೇಸ್‍ನಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ್ದವರ ವಿಚಾರಣೆ ನಡೆಸಲಾಗುತ್ತಿದೆ. ಹಣ ಕೊಟ್ಟ ಮೋಹನ್ ರಾಜ್, ಡೆವಿಲ್ ನಿರ್ಮಾಪಕ ಮಿಲನ ಪ್ರಕಾಶ್, ಪವಿತ್ರಾ ಆಪ್ತೆ ಸಮತಾ, ಶಾಸಕರ ಕಾರು ಚಾಲಕ ಕಾರ್ತಿಕ್‍ಗೆ ನೋಟಿಸ್ ಜಾರಿಗೊಳಿಸಲಾಗಿದೆ.

ರೇಣುಕಾಸ್ವಾಮಿ ಹತ್ಯೆ: ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದನೆಂದು ಆರೋಪಿಸಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಮತ್ತು ಗ್ಯಾಂಗ್ ಇದೇ ದಿನ ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿತ್ತು. ಬಳಿಕ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್‍ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಕೊಲೆಯ ಬಳಿಕ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ಮೋರಿ ಬಳಿ ಎಸೆಯಲಾಗಿತ್ತು. ಇದಾದ ನಂತರ ನಾಲ್ವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ವೇಳೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇರುವುದು ಬಯಲಾಗಿದೆ.

ಈ ಬೆನ್ನಲ್ಲೇ ಪೊಲೀಸರು ಮೈಸೂರಿಗೆ ತೆರಳಿ ದರ್ಶನ್ ಅವರನ್ನು ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಒಬ್ಬೊಬ್ಬರಂತೆ 16 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸದ್ಯ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ.

Share This Article