ಬೆಂಗಳೂರು: ದೇಶದ 5 ಟ್ರಿಲಿಯನ್ ಡಾಲರ್ (US Dollar) ಆರ್ಥಿಕತೆಗೆ ಕರ್ನಾಟಕ ರಾಜ್ಯದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಹೊಂದಿದೆ. ಅದಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಂಡ ರಚಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.
ಯೋಜನಾ ಇಲಾಖೆಯ ((Karnataka Planning Commission) ಕರ್ನಾಟಕ ಆರ್ಥಿಕ ಸಮೀಕ್ಷೆ 2021-22ರ ಆಧಾರದ ಮೇಲೆ ಹೆಚ್ಚಿನ ವಿಶ್ಲೇಷಣೆಯೊಂದಿಗೆ ಮೋಹನ್ ದಾಸ್ ಪೈ ಮತ್ತು ನಿಶಾ ಹೊಳ್ಳ ಅವರು ರಚಿಸಿರುವ ʻKarnataka: A $1 Trillion GDP Visionʼ ಎಂಬ ವರದಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದನ್ನೂ ಓದಿ: ಪ್ರೆಗ್ನೆಂಟ್ ಅಂತ ತಿಳಿದ 48 ಗಂಟೆಯಲ್ಲೇ ಮಗುವನ್ನು ಹೆತ್ತ ತಾಯಿ
Advertisement
Advertisement
ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡಲು ಸರ್ಕಾರದ ಮುಖ್ಯಕಾರ್ಯದರ್ಶಿ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಮೋಹನ್ ದಾಸ್ ಪೈ, ಎಫ್‌ಐಸಿಸಿಐ ಹಾಗೂ ಮೆಕೆನ್ಸಿಯ ಪ್ರತಿನಿಧಿಗಳನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು.
Advertisement
2025ರ ವೇಳೆಗೆ 1 ಟ್ರಿಲಿಯನ್ ಯುಎಸ್ ಡಾಲರ್ (Trillion US Dollar) ಆರ್ಥಿಕತೆಯನ್ನು ಸಾಧಿಸುವ ಗುರಿಯೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವ ಕೆಲಸವನ್ನು ಈ ತಂಡ ಮಾಡಲಿದೆ. ಈ ಕ್ರಿಯಾ ಯೋಜನೆಯ ಪ್ರಗತಿಯ ಮೇಲ್ವಿಚಾರಣೆಯನ್ನು ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮೋದಿ ಅತ್ಯಾಚಾರಿಗಳ ಪರವಾಗಿದ್ದಾರೆ – ರಾಹುಲ್ ಗಾಂಧಿ ಕಿಡಿ
Advertisement
ಫಲಿತಾಂಶ ಆಧಾರಿತ ಉದ್ದೇಶಿತ ಬಜೆಟ್‌ಗೆ ಅನುಕೂಲವಾಗುವಂತೆ ಡಿಸೆಂಬರ್ 2022ರ ಒಳಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ. ಕರ್ನಾಟಕದಿಂದ ಒಂದು ಟ್ರಿಲಿಯನ್ ಯುಎಸ್ ಡಾಲರ್ ಕೊಡುಗೆಯೊಂದಿಗೆ 5 ಟ್ರಿಲಿಯನ್ ಭಾರತದ ಗುರಿಯೊಂದಿಗೆ ನಾವು ಹೊಂದಿಕೊಳ್ಳಬೇಕು. ಬೆಳವಣಿಗೆಯ ದರಗಳನ್ನು ಹೆಚ್ಚಿಸಲು ಯೋಜನೆ ರೂಪಿಸಬೇಕು. ಕರಾವಳಿ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಮೂಲಕ ರಫ್ತನ್ನು ಹೆಚ್ಚಿಸಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮೂಲಸೌಕರ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಮೂಲಸೌಕರ್ಯ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಜೊತೆಗೆ ಅಭಿವೃದ್ಧಿ ಉತ್ತೇಜಿಸಲು ಜನರ ಆರ್ಥಿಕ ಸಾಮರ್ಥ್ಯಗಳನ್ನು ಹೆಚ್ಚಿಸಬೇಕಾಗಿದೆ. ಕೈಗಾರಿಕಾ, ಕೃಷಿ (Agriculture) ಮತ್ತು ಸೇವಾ ಕ್ಷೇತ್ರಗಳಲ್ಲಿ ಉದ್ಯೋಗ (Employment) ಮತ್ತು ಬೆಳವಣಿಗೆ ಉತ್ತೇಜಿಸಲು ಕೈಗಾರಿಕಾ ವಲಯದ ಸಾಮರ್ಥ್ಯ ಹೆಚ್ಚಿಸುವುದರ ಮೂಲಕ ಕೃಷಿ ಮತ್ತು ಸೇವಾ ವಲಯದ ಬೆಳವಣಿಗೆ ಕಾಣಬಹುದಾಗಿದೆ. ಹಾಗಾಗಿ ಕೈಗಾರಿಕೆ ಮತ್ತು ಖಾಸಗಿ ವಲಯಗಳೆರಡೂ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಸಲಹೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಕೃತಿಯ ಲೇಖಕರಾದ ಟಿ.ವಿ. ಮೋಹನ್ ದಾಸ್ ಪೈ, ನಿಶಾ ಹೊಳ್ಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಇನ್ನಿತರರು ಉಪಸ್ಥಿತರಿದ್ದರು.