– ದತ್ತು ಕೇಂದ್ರ ಸೇರಿದ ಮಗು
ಹಾವೇರಿ: ಹತ್ತು ತಿಂಗಳ ಮುದ್ದಾದ ಗಂಡು ಮಗುವನ್ನ ಪೋಷಕರು ಡಾಬಾ ಬಳಿ ಬಿಟ್ಟು ಹೋಗಿರೋ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ ಬಳಿ ನಡೆದಿದೆ.
ಮುದ್ದಾಗಿರೋ ಗಂಡು ಮಗುವನ್ನ ಪೋಷಕರು ಬಿಟ್ಟು ಹೋಗಿದ್ದಾರೆ. ನಾಲ್ಕರ ಕ್ರಾಸ್ ಬಳಿಯ ಭೂತೇಶ್ವರ ದೇವಸ್ಥಾನದಲ್ಲಿ ಬಿಟ್ಟು ಹೋಗಿದ್ದು, ಪೋಷಕರು ಬಂದು ಮಗುವನ್ನು ಕೊಂಡೊಯ್ಯಬಹುದೆಂದು ಸ್ಥಳೀಯರು 5-6 ಗಂಟೆ ಮಗುವಿನ ಹಿಡಿದು ಕಾಯ್ದಿದ್ದಾರೆ. ಆದರೆ ಯಾರೂ ಬಾರದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಡಾಬಾ ಬಳಿಯ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಪಿಎಸ್‍ಐ ಶ್ರೀಶೈಲ ಪಟ್ಟಣಶೆಟ್ಟಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಮಗುವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ದತ್ತು ಕೇಂದ್ರಕ್ಕೆ ಅಧಿಕಾರಿಗಳು ದಾಖಲಿಸಿದ್ದಾರೆ.
ಪೋಷಕರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗಂಡು ಮಗು ಬಿಟ್ಟು ಹೋಗಿದ್ದ ಪೋಷಕರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.