– 20 ಪ್ರವಾಸಿಗರಿಗೆ ಕೊರೊನಾ ಪಾಸಿಟಿವ್
ಚಿಕ್ಕಮಗಳೂರು: ತಾಲೂಕಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಸೇರಿದಂತೆ ಗಿರಿ ಭಾಗದ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಹೊರ ರಾಜ್ಯ ಹಾಗೂ ಹೊರ ಜಿಲ್ಲೆ ಪ್ರವಾಸಿಗರಿಗೆ ಕೈಮಾರ ಚೆಕ್‍ಪೋಸ್ಟ್ ಬಳಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ ಗಿರಿಪ್ರದೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಆದರೆ ಹೊರ ರಾಜ್ಯ ಹಾಗೂ ಹೊರಜಿಲ್ಲೆಗಳಿಂದ ಬರುತ್ತಿರುವ ಕೆಲ ಪ್ರವಾಸಿಗರು ಪರೀಕ್ಷೆಗೆ ಒಳಪಡದೆ ಕಿರಿಕ್ ಮಾಡಿ, ಜಗಳವಾಡಿಕೊಂಡು ಪರೀಕ್ಷೆಗೆ ಒಳಪಡುತ್ತಿದ್ದಾರೆ.
Advertisement
ರಾಜ್ಯ ಜಾಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಚಿಕ್ಕಮಗಳೂರಿನಿಂದ ಗಿರಿ ಪ್ರದೇಶದ ಪ್ರವಾಸಿ ತಾಣಗಳಿಗೆ ಹೋಗುವ ಪ್ರವಾಸಿಗರಿಗೆ ಕೈಮಾರ ಚೆಕ್ ಪೋಸ್ಟ್‍ನಲ್ಲಿ ಕೋವಿಡ್ ಟೆಸ್ಟ್ ಮಾಡಿಯೇ ಬಿಡಲಾಗುತ್ತಿತ್ತು. ಕೆಲ ಪ್ರವಾಸಿಗರು ತಮ್ಮ ಊರುಗಳಲ್ಲೇ ಕೊರೊನಾ ಟೆಸ್ಟ್ ಮಾಡಿಸಿ, ರಿಪೋರ್ಟ್ ಜೊತೆಯೇ ಬರುತ್ತಿದ್ದಾರೆ. ಆದರೆ ಕೆಲ ಪ್ರವಾಸಿಗರು ವರದಿಯನ್ನೂ ತರುವುದಿಲ್ಲ. ಇಲ್ಲಿಯೂ ಪರೀಕ್ಷೆಗೆ ಒಳಪಡದೆ ಆರೋಗ್ಯ ಸಿಬ್ಬಂದಿ ಜೊತೆ ಜಗಳವಾಡುತ್ತಿದ್ದಾರೆ.
Advertisement
Advertisement
ಈಗಾಗಲೇ ಕಳೆದ 10 ದಿನದಿಂದ ಕೈಮಾರ ಚೆಕ್ ಪೋಸ್ಟ್ ನಲ್ಲಿ ಪ್ರವಾಸಿಗರಿಗೆ ಕೊರೊನಾ ಟೆಸ್ಟ್ ನಡೆಸಲಾಗುತ್ತಿದೆ. 10 ದಿನದಲ್ಲಿ ಸುಮಾರು 6,000 ಪ್ರವಾಸಿಗರಿಗೆ ಕೊರೊನಾ ಟೆಸ್ಟ್ ನಡೆಸಿದ್ದಾರೆ. ಇದರಲ್ಲಿ ಸುಮಾರು 20 ಜನರಿಗೆ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದವರು ಆರೋಗ್ಯ ಸಿಬ್ಬಂದಿ ಮಾತಿಗೆ ಬೆಲೆ ನೀಡಿ ವಾಪಸ್ ಹೋಗುತ್ತಿದ್ದಾರೆ. ಆದರೆ ಕೆಲ ಪ್ರವಾಸಿಗರು ಚೆನ್ನಾಗಿದ್ದೇವೆ, ನಮಗೆ ಏನೂ ಸಮಸ್ಯೆ ಇಲ್ಲ ಎಂದು ವಾದ ಮಾಡುತ್ತಾರೆ. ಚೆಕ್ ಮಾಡಿ, ಎರಡೆರಡು ಸಲ ಚೆಕ್ ಮಾಡಿಸಿಕೊಳ್ಳುತ್ತಿದ್ದಾರೆ. ಪಾಸಿಟಿವ್ ಬಂದ ಪ್ರವಾಸಿಗರ ವರ್ತನೆಗೆ ಬೇಸತ್ತ ಸಿಬ್ಬಂದಿ, ಡಿಎಚ್‍ಓ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೂ ತಂದಿದ್ದಾರೆ.
Advertisement
ಇತ್ತೀಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆ ಪರೀಕ್ಷೆಯನ್ನೂ ಹೆಚ್ಚಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳಿಗೆ ನಿರ್ಬಂಧವಿಲ್ಲ. ಹೀಗಾಗಿ ಪ್ರವಾಸಿಗರಿಗೆ ಕೋವಿಡ್ ಟೆಸ್ಟ್ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಪೊಲೀಸರು ಕೂಡ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಆರೋಗ್ಯ ಸಿಬ್ಬಂದಿ ಜೊತೆ ಕಿರಿಕ್ ಮಾಡುತ್ತಿರುವ ಪ್ರವಾಸಿಗರಿಗೆ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.