ಹುಬ್ಬಳ್ಳಿ: ಪ್ರಯಾಣಿಕರೊಬ್ಬರ 10 ಲಕ್ಷ ಮೌಲ್ಯದ ಬಂಗಾರದ ಆಭರಣ ಕಳ್ಳತನ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಹುಬ್ಬಳ್ಳಿ ರೈಲ್ವೇ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಸನ್ನಿ ಸನ್ಮಾನ ಹವೀಜಾ (24) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮಂಟೂರು ರಸ್ತೆಯ ನಿವಾಸಿಯಾಗಿದ್ದಾನೆ. ಕಳ್ಳತನ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧನದ ವೇಳೆ ಈತನಿಂದ 10 ಲಕ್ಷ ಮೌಲ್ಯದ ಚಿನ್ನಾಭರಣಗಳು ಹಾಗೂ ವಿವಿಧ ಕಂಪನಿಯ ಮೊಬೈಲ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಹುಬ್ಬಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.