ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ದೋಡಾದಲ್ಲಿ (Doda) ಸೇನಾ ವಾಹನವು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು, 10 ಮಂದಿ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ.
ಕಾರ್ಯಾಚರಣೆಗಾಗಿ ತೆರಳುತ್ತಿದ್ದ ಕ್ಯಾಸ್ಪಿರ್ ಎಂಬ ಗುಂಡು ನಿರೋಧಕ ಸೇನಾ ವಾಹನವು ಖನ್ನಿ ಮೇಲ್ಭಾಗದಲ್ಲಿ ಭದೇರ್ವಾ-ಚಂಬಾ ಅಂತರರಾಜ್ಯ ರಸ್ತೆಯಿಂದ ತೆರಳುತ್ತಿದ್ದಾಗ ಕಮರಿಗೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 2000ರಲ್ಲಿ ಕೆಂಪುಕೋಟೆಯಲ್ಲಿ ದಾಳಿ ಕೇಸ್; ಎಲ್‌ಇಟಿ ಭಯೋತ್ಪಾದಕ ಸಲ್ಲಿಸಿದ್ದ ಕ್ಯೂರೇಟಿವ್ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ
ದೋಡಾದಲ್ಲಿ ನಡೆದ ದುರದೃಷ್ಟಕರ ರಸ್ತೆ ಅಪಘಾತದಲ್ಲಿ ನಮ್ಮ 10 ವೀರ ಭಾರತೀಯ ಸೇನೆಯ ಸೈನಿಕರು (Indian Army) ಸಾವನ್ನಪ್ಪಿರುವುದು ತೀವ್ರ ದುಃಖ ತಂದಿದೆ. ನಮ್ಮ ವೀರ ಸೈನಿಕರ ಅತ್ಯುತ್ತಮ ಸೇವೆ ಮತ್ತು ಸರ್ವೋಚ್ಚ ತ್ಯಾಗವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಈ ತೀವ್ರ ದುಃಖದ ಕ್ಷಣದಲ್ಲಿ, ಇಡೀ ರಾಷ್ಟ್ರವು ದುಃಖಿತ ಕುಟುಂಬಗಳೊಂದಿಗೆ ಒಗ್ಗಟ್ಟು ಮತ್ತು ಬೆಂಬಲದೊಂದಿಗೆ ನಿಂತಿದೆ. 10 ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿನ್ಹಾ ಹೇಳಿದ್ದಾರೆ. ಇದನ್ನೂ ಓದಿ: ಮಣಿಪುರ| ಕುಕಿ ಸಮುದಾಯದ ಪತ್ನಿ ಭೇಟಿಯಾಗಲು ಹೋಗಿದ್ದ ಮೈತೇಯಿ ವ್ಯಕ್ತಿಗೆ ಗುಂಡಿಕ್ಕಿ ಕೊಲೆ
ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ದೋಡಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾವು 10 ಭಾರತೀಯ ಸೇನೆಯ ವೀರ ಸೈನಿಕರನ್ನು ಕಳೆದುಕೊಂಡಿದ್ದೇವೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡ ಸೈನಿಕರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡಲು ಎಲ್ಲಾ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಈ ಕಷ್ಟದ ಸಮಯದಲ್ಲಿ ರಾಷ್ಟ್ರವು ನಮ್ಮ ಸಶಸ್ತ್ರ ಪಡೆಗಳು ಮತ್ತು ಅವರ ಕುಟುಂಬಗಳೊಂದಿಗೆ ನಿಂತಿದೆ ಎಂದು ಬರೆದುಕೊಂಡಿದ್ದಾರೆ.

