– 1 ಕೋಟಿ ಟೀ ಮಾರಾಟಕ್ಕೆ ಗುರಿ
– ಟೀ ಪಾಯಿಂಟ್‌ನಲ್ಲಿ ನಂದಿನಿ ಹಾಲು ಬಳಕೆ, ಉತ್ಪನ್ನಗಳ ಮಾರಾಟ
ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ (Maha KumbaMela) 10 ಟೀ ಪಾಯಿಂಟ್ (Tea Point) ತೆರೆಯಲು ಕೆಎಂಎಫ್ (KMF) ಒಪ್ಪಂದ ಮಾಡಿಕೊಂಡಿದೆ.
Advertisement
ಮಹಾಕುಂಭಮೇಳದಲ್ಲಿ ಕೆಎಂಎಫ್ ಸಹಭಾಗಿತ್ವದಲ್ಲಿ 10 ಟೀ ಪಾಯಿಂಟ್ ತೆರೆಯಲು ಸಿದ್ಧತೆ ನಡೆಸಲಾಗಿದ್ದು, ಜೊತೆಗೆ ನಂದಿನಿ ಹಾಲಿನ (Nandini Milk) ಬಳಕೆ ಹಾಗೂ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಈ ಟೀ ಪಾಯಿಂಟ್‌ನಿಂದ ಸುಮಾರು ಒಂದು ಕೋಟಿ ಟೀ ಮಾರಾಟ ಮಾಡುವ ಗುರಿಯನ್ನು ಕೆಎಂಎಫ್ ಹಾಕಿಕೊಂಡಿದೆ. ಈ ಮೂಲಕ ಒಂದು ಮೇಳದಲ್ಲಿ ಅತೀ ಹೆಚ್ಚು ಟೀ ಮಾರಾಟ ಮಾಡಿದ ಸಂಸ್ಥೆಯೆಂದು ಗಿನ್ನಿಸ್ ದಾಖಲೆ ನಿರ್ಮಿಸುವ ಪ್ರಯತ್ನ ಮಾಡಲಿದೆ.ಇದನ್ನೂ ಓದಿ: BBK 11: ವರಸೆ ಬದಲಿಸಿದ ಭವ್ಯಾಗೆ ಪುಂಗಬೇಡ ಎಂದ ತ್ರಿವಿಕ್ರಮ್
Advertisement
Advertisement
ಉತ್ತರಪ್ರದೇಶದ (Uttara Pradesh) ಪ್ರಯಾಗ್‌ರಾಜ್‌ನಲ್ಲಿ ಜ.13ರಿಂದ ಪ್ರಾರಂಭವಾಗಿರುವ ಮಾಹಕುಂಭಮೇಳ 44 ದಿನಗಳ ಕಾಲ ನಡೆಯಲಿದ್ದು, ಈ ಮೇಳದಲ್ಲಿ ನಂದಿನಿ ಹಾಲಿನ ಮೂಲಕ ಖ್ಯಾತಿ ಪಡೆದಿರುವ ಕೆಎಂಎಫ್ ತನ್ನ ಕೈ ಚಳಕ ತೋರಿಸಲಿದೆ.
Advertisement
ಇನ್ನೂ ಮಾಹಕುಂಭಮೇಳದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಾಗ ಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದು, ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯುತ್ತಿದೆ. ಫೆ.26ರ ಮಹಾ ಶಿವರಾತ್ರಿವರೆಗೂ ಮಹಾಕುಂಭಮೇಳ ನಡೆಯಲಿದೆ.ಇದನ್ನೂ ಓದಿ:ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ – ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಹೇಳೋದೇನು?