ಇಸ್ಲಾಮಾಬಾದ್: ಪಾಕಿಸ್ತಾನದ ದೇರಾ ಇಸ್ಮಾಯಿಲ್ ಖಾನ್‌ನಗರದಲ್ಲಿರುವ ಚೋಡ್ವಾನ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಉಗ್ರರಿಂದ ಭೀಕರ ಗುಂಡಿನ ದಾಳಿ (Terror Attack) ನಡೆದಿದ್ದು, 10 ಮಂದಿ ಪೊಲೀಸ್ ಅಧಿಕಾರಿಗಳು (Pakistan Cops) ಸಾವನ್ನಪ್ಪಿದ್ದಾರೆ. 6 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಸೋಮವಾರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಉಗ್ರರು ಪೊಲೀಸ್ ಠಾಣೆ ಮೇಲೆ ಸ್ನೈಪರ್‌ಗಳಿಂದ ಗುಂಡಿನ ದಾಳಿ ನಡೆಸಿ ಠಾಣೆಯೊಳಗೆ ನುಗ್ಗಿದ್ದಾರೆ. ಪೊಲೀಸ್ ಠಾಣೆ ನುಗ್ಗಿದ ಬಳಿಕ ಹ್ಯಾಂಡ್ ಗ್ರೆನೇಡ್‌ಗಳನ್ನು (Hand Grenades) ಬಳಸಿ ದಾಳಿ ನಡೆಸಿದ್ದಾರೆ ಇದರಿಂದ 10 ಮಂದಿ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
Advertisement
Advertisement
ಪೊಲೀಸ್ ಠಾಣೆಯಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ. ಇದೇ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆ (National Elections) ನಡೆಯಲಿದ್ದು, ಅದಕ್ಕೂ ಮುನ್ನವೇ ಉಗ್ರರ ದಾಳಿ ನಡೆದಿರುವುದು ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಇದನ್ನೂ ಓದಿ: ಜೈಲು ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳಲ್ಲಿ ಬಾಂಬ್ ಬ್ಲಾಸ್ಟ್ – ಇಮ್ರಾನ್ ಖಾನ್ ಪಕ್ಷದ ಮೂವರ ದುರ್ಮರಣ
Advertisement
ಇತ್ತೀಚೆಗೆ ಖೈಬರ್ ಪಖ್ತುಂಖ್ವಾ ಪ್ರದೇಶ ಮತ್ತು ಬಲೂಚಿಸ್ತಾನದಲ್ಲಿ ಭಯೋತ್ಪಾದಕ ಕೃತ್ಯಗಳು ಹೆಚ್ಚಾಗಿವೆ. ಕಳೆದ ಜನವರಿ 31ರಂದು ಅಫ್ಘಾನಿಸ್ತಾನ ಗಡಿಯಲ್ಲಿರುವ ಬುಡಕಟ್ಟು ಜಿಲ್ಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ರೆಹಾನ್ ಝೆಬ್ ಖಾನ್ ಅವರನ್ನ ಗುಂಡಿಕ್ಕಿ ಕೊಲ್ಲಲಾಗಿತ್ತು. ಈತನನ್ನು ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಬೆಂಬಲಿಗನಾಗಿದ್ದ ಎಂದು ಹೇಳಲಾಗಿತ್ತು. ಇದನ್ನೂ ಓದಿ: ಆಸ್ಟ್ರೇಲಿಯಾಕ್ಕೆ 600 ಕೋಟಿ ಮೌಲ್ಯದ ಕೊಕೇನ್ ಅಕ್ರಮ ರಫ್ತು – ಭಾರತೀಯ ಮೂಲದ ದಂಪತಿಗೆ ಶಿಕ್ಷೆ
Advertisement
ಅಲ್ಲದೇ ಪ್ರಕರಣವೊಂದರಲ್ಲಿ ಇಮ್ರಾನ್ ಖಾನ್‌ಗೆ ಜೈಲು ಶಿಕ್ಷೆ ವಿಧಿಸಿದ ಅದೇ ದಿನ (ಜ.30) ಬಲೂಚಿಸ್ತಾನ ಪ್ರದೇಶದಲ್ಲಿ ಬಾಂಬ್ ಬ್ಲಾಸ್ಟ್ ನಡೆದಿತ್ತು. ಮೂವರು ನಾಗರಿಕರು ದುರ್ಮರಣ ಹೊಂದಿದ್ದರು. ಈ ನಡುವೆ ಪಾಕಿಸ್ತಾನ ಸೇನೆ ಮತ್ತು ಭದ್ರತಾ ಏಜೆನ್ಸಿಗಳ ಸಹಾಯದಿಂದ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ಪಾಕಿಸ್ತಾನ ಚುನಾವಣಾ ಆಯೋಗ ಹೇಳಿದೆ. ಇದನ್ನೂ ಓದಿ: ಕಾನೂನುಬಾಹಿರ ವಿವಾಹ – ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದಂಪತಿಗೆ 7 ವರ್ಷ ಜೈಲು