ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕನ್ (Mexico) ರಾಜ್ಯವಾದ ಚಿಯಾಪಾಸ್‌ನಲ್ಲಿ ಸರಕು ಸಾಗಣೆ ಮಾಡುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿ 10 ಮಂದಿ ವಲಸಿಗರು ದಾರುಣ ಸಾವಿಗೀಡಾಗಿದ್ದಾರೆ. 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಯಾಪಾಸ್‌ನಲ್ಲಿರುವ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ವಲಸಿಗರನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ರಾಷ್ಟ್ರೀಯ ವಲಸೆ ಸಂಸ್ಥೆ (ಐಎನ್‌ಎಂ) ತಿಳಿಸಿದೆ. ಇದನ್ನೂ ಓದಿ: 350 ವರ್ಷಗಳ ಬಳಿಕ ಭಾರತಕ್ಕೆ ಮರಳಲಿದೆ ಶಿವಾಜಿ ಮಹಾರಾಜರ `ವ್ಯಾಘ್ರ ನಖ’
ಟ್ರಕ್‌ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ. ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಮಗು ಸೇರಿದಂತೆ 10 ಮಂದಿ ವಲಸಿಗರು ಮೃತಪಟ್ಟಿದ್ದಾರೆ. ಗಾಯಗೊಂಡ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಲಸಿಗರನ್ನು ಒಳಗೊಂಡ ರಸ್ತೆ ಅಪಘಾತಗಳು ಮೆಕ್ಸಿಕೋದಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಮೆಕ್ಸಿಕೊದಿಂದ ಅಮೆರಿಕ ದೇಶಕ್ಕೆ ವಲಸೆ ಹೋಗುವವರ ಸಂಖ್ಯೆ ಹೆಚ್ಚು. ಸೂಕ್ತ ನಿರ್ವಹಣೆ ಇಲ್ಲದ ವಾಹಗಳಲ್ಲೇ ಹೆಚ್ಚಿನ ಮಂದಿ ವಲಸೆ ಹೋಗುತ್ತಾರೆ. ಹೀಗಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ
2021ರ ಡಿಸೆಂಬರ್‌ನಲ್ಲೂ ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಸುಮಾರು 54 ಮಂದಿ ಮೃತಪಟ್ಟಿದ್ದರು.
Web Stories