ಭೋಪಾಲ್: ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 10 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬ್ಬಲ್‌ಪುರ ಜಿಲ್ಲೆಯ ಗೋಹಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಂದಲ್ ಭಾಟಾದಲ್ಲಿರುವ ನ್ಯೂ ಲೈಫ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಘಟನೆ ಸಂಭವಿಸಿದ್ದು, 10 ಜನ ಸಾವನ್ನಪ್ಪಿರುವುದು ದೃಢವಾಗಿದೆ. ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಅಲ್ಲಯ್ಯ ರಾಜಾ ತಿಳಿಸಿದ್ದಾರೆ.
Advertisement
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇತರ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಎನ್‌ಟಿಆರ್ ಮಗಳು ಉಮಾ ಮಹೇಶ್ವರಿ ಆತ್ಮಹತ್ಯೆಗೆ ಶರಣು
Advertisement
Advertisement
Advertisement
ಘಟನೆಯಲ್ಲಿ 10 ಜನ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. 10ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಮೃತರನ್ನು ಗುರುತಿಸಲಾಗುತ್ತಿದೆ ಎಂದು ಜಬ್ಬಲ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಬಹುಗುಣ್ ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ವಯಸ್ಸಾಗಿಲ್ಲ, ನನಗಿನ್ನೂ 35 ವರ್ಷ ವಯಸ್ಸು: ಗೋವಿಂದ ಕಾರಜೋಳ
ವರದಿಗಳ ಪ್ರಕಾರ ಆಸ್ಪತ್ರೆಯಿಂದ ಸುರಕ್ಷಿತ ಪ್ರದೇಶಕ್ಕೆ ತೆರಳಲು ಒಂದೇ ಮಾರ್ಗವಿದ್ದ ಕಾರಣ ಹೆಚ್ಚಿನ ಜನರು ಒಳಗೆ ಸಿಲುಕಿಕೊಂಡಿದ್ದರು. ಆರಂಭದಲ್ಲಿ ಅಗ್ನಿಶಾಮಕ ದಳದ ವಾಹನಗಳಿಂದಲೂ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗಿರಲಿಲ್ಲ. ಬಳಿಕ ವಿದ್ಯುತ್ ಇಲಾಖೆಯ ನೌಕರರು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಬಳಿಕ 1 ಗಂಟೆಯ ಸತತ ಪ್ರಯತ್ನದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.