ಕೌಲಾಲಂಪುರ್: ಮಲೇಷಿಯಾದಲ್ಲಿ (Malaysia) ನೌಕಾಪಡೆಯ 2 ಹೆಲಿಕಾಪ್ಟರ್‌ಗಳ (Navy Helicopters) ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 10 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
2 military helicopters crash after midair collision in Malaysia, killing all 10 aboard. ???????????????? pic.twitter.com/i37XDJJvhd
— MP (@Mp220Mp) April 23, 2024
ಇಂದು ಬೆಳಗ್ಗೆ 9.30ರ ಸುಮಾರಿಗೆ ಲುಮುಟ್ ನೌಕಾ ನೆಲೆಯಲ್ಲಿ ಈ ಅವಘಡ ಸಂಭವಿಸಿದೆ. ಸದ್ಯ ಹೆಲಿಕಾಪ್ಟರ್‌ಗಳ ಡಿಕ್ಕಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ತಂದೆಯ ಕಾರು ಹರಿದು ಪುಟ್ಟ ಕಂದಮ್ಮ ದುರ್ಮರಣ
ಮಹಿತಿಗಳ ಪ್ರಕಾರ, ರಾಯಲ್ ಮಲೇಷಿಯನ್ ನೇವಿ ಪರೇಡ್‌ಗಾಗಿ ಹೆಲಿಕಾಪ್ಟರ್‌ಗಳು ಪೂರ್ವಾಭ್ಯಾಸ ಮಾಡುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಹೆಲಿಕಾಪ್ಟರ್‌ನಲ್ಲಿದ್ದ 10 ಮಂದಿ ಸಿಬ್ಬಂದಿ ಮೃತಪಟ್ಟಿರುವ ಬಗ್ಗೆ ನೌಕಾಪಡೆ ದೃಢಪಡಿಸಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.