ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆ (Rain) ಸುರಿಯುತ್ತಿರುವ ಪರಿಣಾಮ ರಾಯಗಢ (Raigad) ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಭೂಕುಸಿತ (Land Slide) ಉಂಟಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಬುಡಕಟ್ಟು ಜನಾಂಗದ ಹಲವಾರು ಮನೆಗಳಿರುವ ಖಲಾಪುರದಲ್ಲಿ (Khalapur) ಧಾರಾಕಾರ ಮಳೆ ಸುರಿದ ಪರಿಣಾಮ ಭೂಕುಸಿತವಾಗಿದ್ದು, 100ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಇಲ್ಲಿಯವರೆಗೆ 75 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಗಳು ಹೇಳಿವೆ. ಇದನ್ನೂ ಓದಿ: ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಆರೋಪಿಗಳನ್ನ ಮರಣದಂಡನೆ ಶಿಕ್ಷೆಗೆ ಸರ್ಕಾರ ಪರಿಗಣಿಸಲಿದೆ – ಬಿರೇನ್ ಸಿಂಗ್
ಭೂಕುಸಿತದಿಂದಾಗಿ ಗುಡ್ಡದಿಂದ ಭಾರೀ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ಮನೆಗಳ ಮೇಲೆ ಬಿದ್ದಿದ್ದು, ಸುಮಾರು 30 ಮನೆಗಳು ಮಣ್ಣಿನ ಅಡಿಯಲ್ಲಿ ಹೂತುಹೋಗಿವೆ. ಘಟನೆ ನಡೆದ ಸ್ಥಳವಾದ ಇರ್ಸಾಲವಾಡಿ (Irsalwadi) ಬೆಟ್ಟದ ಮೇಲಿರುವ ಒಂದು ಹಳ್ಳಿಯಾಗಿದ್ದು, ಅಲ್ಲಿಗೆ ಸಂಚರಿಸಲು ಸರಿಯಾದ ಮಾರ್ಗವಿಲ್ಲ. ಆ ಹಳ್ಳಿಯನ್ನು ತಲುಪಬೇಕಾದರೆ ಸುಮಾರು 1 ಕಿಲೋ ಮೀಟರ್‌ನಷ್ಟು ದೂರ ಚಾರಣ ಮಾಡಬೇಕು. ಇದನ್ನೂ ಓದಿ: ಚೀತಾಗಳ ಸಾವು ಉತ್ತಮ ಬೆಳವಣಿಗೆಯಲ್ಲ: ಸುಪ್ರೀಂ
ಘಟನೆಯ ಬಗ್ಗೆ ಅರಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಗುರುವಾರ ಬೆಳಗ್ಗೆ ಭೂಕುಸಿತ ಉಂಟಾದ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವ ಬಗ್ಗೆ, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ – ಸುಪ್ರೀಂಕೋರ್ಟ್ ಅಸಮಾಧಾನ, ಸ್ವಯಂ ದೂರು ದಾಖಲು
ಘಟನೆಯ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಎರಡು ತಂಡಗಳು ಸ್ಥಳಕ್ಕೆ ಧಾವಿಸಿ ಶೋಧಕಾರ್ಯವನ್ನು ನಡೆಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡುತ್ತಿದೆ. ಎನ್‌ಡಿಆರ್‌ಎಫ್, ಅಗ್ನಿ ಶಾಮಕದಳ ಮತ್ತು ಪೊಲೀಸರು ಕಾಲ್ನಡಿಗೆಯಲ್ಲಿ ಘಟನಾ ಸ್ಥಳಕ್ಕೆ ತಲುಪಿದ್ದು, ಹತ್ತಿಕೊಂಡು ಹೋಗುವ ಸಂದರ್ಭ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮಣಿಪುರ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ – ಓರ್ವ ಆರೋಪಿ ಅರೆಸ್ಟ್
ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡುವ ಸಲುವಾಗಿ ಮುಂಬೈನ ಸಾಂತಾಕ್ರೂಜ್ ವಿಮಾನ ನಿಲ್ದಾಣದಲ್ಲಿ ಎರಡು ಹೆಲಿಕಾಪ್ಟರ್‌ಗಳು ಸಿದ್ಧವಾಗಿದೆ. ಆದರೆ ಹವಾಮಾನ ಪರಿಸ್ಥಿತಿ ಸರಿಯಿಲ್ಲದ ಕಾರಣದಿಂದಾಗಿ ವಿಮಾನ ಹಾರಾಟ ಕಷ್ಟಕರವಾಗಿದ್ದು, ಅಪಾಯಕಾರಿಯಾಗಿದೆ. ಸದ್ಯ 150 ಎನ್‌ಡಿಆರ್‌ಎಫ್ (NDRF) ಸಿಬ್ಬಂದಿ ಮತ್ತು 500 ಸಿಐಡಿಸಿಒ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮಾಡುತ್ತಿದ್ದು, ಘಟನೆ ನಡೆದ ಸ್ಥಳವನ್ನು ತಲುಪಲು ಸುಮಾರು 60-90 ನಿಮಿಷಗಳನ್ನು ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ – ತಪ್ಪಿಸ್ಥರನ್ನ ಬಿಡೋದಿಲ್ಲ ; ಮಣಿಪುರ ಘಟನೆ ಸಂಬಂಧ ಮೋದಿ ಫಸ್ಟ್ ರಿಯಾಕ್ಷನ್
ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ರಾಯಗಢದ ಆರು ಪ್ರಮುಖ ನದಿಗಳ ಪೈಕಿ ಸಾವಿತ್ರಿ ಮತ್ತು ಪಾತಾಳಗಂಗಾ ಎಂಬ ಎರಡು ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಅಲ್ಲದೇ ಕುಂಡಲಿಕಾ ಮತ್ತು ಅಂಬಾ ನದಿಗಳು ಎಚ್ಚರಿಕಾ ಘಟ್ಟವನ್ನು ತಲುಪಿದ್ದು, ಗಧಿ ಮತ್ತು ಉಲ್ಲಾಸ್ ಎಂಬ ನದಿಗಳು ಅಲರ್ಟ್ ಮಾರ್ಕ್‌ನ ಸಮೀಪ ತಲುಪಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: Hit and Run – ಕಾರು ಚಾಲಕನ ಹುಚ್ಚಾಟಕ್ಕೆ 9 ಬಲಿ, 13 ಮಂದಿಗೆ ಗಾಯ
ಮಹಾರಾಷ್ಟ್ರದಲ್ಲಿ ನಿರಂತರ ಮಳೆಯ ಪರಿಣಾಮ ಮುಂಬೈ, ರಾಯಗಢ ಮತ್ತು ಪಾಲ್ಘರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಸೀಮಾ ಹೈದರ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ – ಪಾಕ್ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್ ರಿಕ್ವೆಸ್ಟ್
Web Stories