ಚಿಕ್ಕೋಡಿ: ರಾಜ್ಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಸ್ವಾಮೀಜಿಗಳಿಗೆ 10% ಡಿಸ್ಕೌಂಟ್ ಮಾಡಿ 30% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ. ಉಳಿದವರಿಗೆಲ್ಲ 40% ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ವ್ಯಂಗ್ಯವಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಠಗಳ ಅನುದಾನದಲ್ಲೂ ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎನ್ನುವ ದಿಂಗಾಲೇಶ್ವರ ಸ್ವಾಮೀಜಿಗಳ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಗೋ ಮಾತೆ ಎಂದು ಹೇಳುತ್ತಾರೆ, ಗೋ ಮಾತೆಯ ಮೇವು ಹಗರಣ ಕೂಡ ಬರುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಯುಪಿ ಮಾಡೆಲ್ ಬೇಡವೇ ಬೇಡ: ಮೌಲ್ವಿ ಮಕ್ಸೂದ್ ಇಮ್ರಾನ್
Advertisement
Advertisement
ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಗೃಹ ಸಚಿವರಾಗಲು ಕ್ಷಮತೆ ಇಲ್ಲ. ರಾಮಲಿಂಗಾ ರೆಡ್ಡಿ ಗೃಹ ಮಂತ್ರಿಯಾಗಿದ್ದಾಗ ಈ ರೀತಿ ಭ್ರಷ್ಟಾಚಾರ ಇರಲಿಲ್ಲ. ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಭ್ರಷ್ಟಾಚಾರ ಆಗಿದೆ. ಹಣ ಕೊಟ್ಟು ಪೊಲೀಸ್ ಅಧಿಕಾರಿಗಳಾದವರು ಮತ್ತೆ ಜನರನ್ನೇ ಲೂಟಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಕಾಲಾವಧಿಯಲ್ಲಿ ಒಂದು ರೂ. ಹಣ ಇಲ್ಲದೇ ನೇಮಕಾತಿಗಳು ನಡೆದಿವೆ ಎಂದರು. ಇದನ್ನೂ ಓದಿ: ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಿ: ಸತ್ಯದೇವಾನಂದ ಸರಸ್ವತಿ
Advertisement
ಸುದ್ದಿಗೋಷ್ಠಿಯಲ್ಲಿ ಶಾಸಕ ಗಣೇಶ್ ಹುಕ್ಕೇರಿ, ಕಾಂಗ್ರೆಸ್ ಮುಖಂಡ ಬಾಲಚಂದ್ರ ಇನಾಮದಾರ, ಮಾಜಿ ಸಚಿವ ಎಬಿ ಪಾಟೀಲ್, ರಾಜು ಕಾಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.