ಮುಂಬೈ: ಮಹಾರಾಷ್ಟ್ರದ (Maharashtra) ಕೊಲ್ಲಾಪುರದಲ್ಲಿ (Kolhapur) ಗುರುವಾರ ರಾತ್ರಿ ಎರಡು ಅನ್ಯಕೋಮಿನ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕೊಲ್ಲಾಪುರದ ಸಿದ್ಧಾರ್ಥನಗರದಲ್ಲಿ `ರಾಜೇಬಾಗ್‍ಸ್ವರ್ ಫುಟ್ಬಾಲ್ ಕ್ಲಬ್’ನ 31ನೇ ವರ್ಷಾಚರಣೆಯ ಕಾರ್ಯಕ್ರಮದ ಸಂದರ್ಭದಲ್ಲಿ ಹಿಂಸಾಚಾರ ನಡೆದಿದೆ. ಕಾರ್ಯಕ್ರಮದ ಬ್ಯಾನರ್‌ಗಳು, ಪೋಸ್ಟರ್‌ಗಳು ಮತ್ತು ಧ್ವನಿವರ್ಧಕ ವ್ಯವಸ್ಥೆ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದಾಗ ಉದ್ವಿಗ್ನತೆ ಉಂಟಾಗಿದೆ. ರಾತ್ರಿ 10 ಗಂಟೆಯ ಸುಮಾರಿಗೆ ಕಲ್ಲು ತೂರಾಟ ನಡೆದಿದೆ. ಇದನ್ನೂ ಓದಿ: ಹೈದ್ರಾಬಾದ್‌ನಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢ ಸಾವು
ಎರಡು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಹಲವು ವಾಹನಗಳನ್ನು ಧ್ವಂಸ ಮಾಡಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಶಾಂತಿ ಕಾಪಾಡುವಂತೆ ಎರಡೂ ಸಮುದಾಯದ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಇದನ್ನೂ ಓದಿ: ವಾಟ್ಸಪ್‌ನಲ್ಲಿ ಬಂತು ಮದುವೆ ಕಾರ್ಡ್ – ಕ್ಲಿಕ್ ಮಾಡ್ತಿದ್ದಂಗೆ 2 ಲಕ್ಷ ರೂ. ಕಳೆದುಕೊಂಡ ಸರ್ಕಾರಿ ನೌಕರ