ಲಕ್ನೋ: ಭಾರೀ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು (Meerut Building Collapses) ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಮೀರತ್‌ನ ಜಾಕಿರ್ ಕಾಲೋನಿಯಲ್ಲಿ ನಡೆದಿದೆ.
ಇದುವರೆಗೆ ಅಧಿಕಾರಿಗಳು ಒಟ್ಟು ಐವರನ್ನು ಅವಶೇಷಗಳಿಂದ ರಕ್ಷಿಸಿದ್ದಾರೆ. ಬಲಿಯಾದ 10 ಮಂದಿಯಲ್ಲಿ 1 ವರ್ಷದ ಮಗು ಸೇರಿದಂತೆ ನಾಲ್ವರು ಮಕ್ಕಳಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: Video | ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ – ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ?
ಮಳೆಯಿಂದಾಗಿ ಬಿಲ್ಡಿಂಗ್ ಕುಸಿದಿದೆ ಎಂದು ಮೀರತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ. ಭಾರೀ ಮಳೆಯ ನಡುವೆಯೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಅಕ್ಕಪಕ್ಕದ ಮನೆಗಳಿಗೆ ಚಿಲಕ ಹಾಕಿ, ಪ್ರೀ ಪ್ಲ್ಯಾನ್ಡ್ ದರೋಡೆ – ಬೆಚ್ಚಿಬಿದ್ದ ರಾಯಚೂರು ಜನ
ಸುಮಾರು 35 ವರ್ಷಗಳಷ್ಟು ಹಳೆಯದಾದ ಕಟ್ಟಡವೂ ಶಿಥಿಲಾವಸ್ಥೆಯಲ್ಲಿತ್ತು ಎಂದು ಹೇಳಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಘಟನೆಯ ದೃಶ್ಯಗಳನ್ನು ಗಮನಿಸಿದ್ದು, ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೇ ಸೆಪ್ಟೆಂಬರ್ 7 ರಂದು, ಲಕ್ನೋದ ಟ್ರಾನ್ಸ್‌ಪೋರ್ಟ್ ನಗರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡದ ಗೋಡೌನ್‌ಗಳು ಮತ್ತು ಮೋಟಾರ್ ವರ್ಕ್‌ಶಾಪ್ ಕುಸಿದು 8 ಜನ ಸಾವನ್ನಪ್ಪಿದರು. 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದನ್ನೂ ಓದಿ: Kolkata Horror | ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ; ಸಂದೀಪ್ ಘೋಷ್ ಸೇರಿ ಸಿಬಿಐನಿಂದ ಇಬ್ಬರ ಬಂಧನ