– 30ಕ್ಕೂ ಅಧಿಕ ಮಂದಿಗೆ ಗಾಯ
ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮಂಗಳವಾರ (ಸೆ.30) ಬೆಳಗ್ಗೆ ಕ್ವೆಟ್ಟಾದ ಜರ್ಘೂನ್ ರಸ್ತೆಯಲ್ಲಿರುವ ಅರೆಸೈನಿಕ ಪಡೆಯ ಪ್ರಧಾನಿ ಕಚೇರಿ ಮೇಲೆ ಪ್ರಬಲವಾದ ಬಾಂಬ್ ಸ್ಫೋಟಗೊಂಡಿದೆ. ಪೊಲೀಸರ ಮಾಹಿತಿ ಪ್ರಕಾರ, ಸ್ಫೋಟದ ತೀವ್ರತೆಯಿಂದಾಗಿ ಸಮೀಪದ ಕಟ್ಟಡಗಳ ಬಾಗಿಲು ಹಾಗೂ ಕಿಟಕಿಗಳು ಪುಡಿಪುಡಿಯಾಗಿವೆ. ಸ್ಫೋಟದ ಸ್ವಲ್ಪ ಹೊತ್ತಿನ ನಂತರ ಗುಂಡಿನ ಚಕಮಕಿಯು ಕೇಳಿಬಂದಿದೆ ಎಂದು ತಿಳಿಸಿದ್ದಾರೆ.
ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.ಇದನ್ನೂ ಓದಿ: ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ
ಈ ಕುರಿತು ಬಲೂಚಿಸ್ತಾನದ ಆರೋಗ್ಯ ಸಚಿವ ಬಖ್ತ್ ಮುಹಮ್ಮದ್ ಕಾಕರ್ ಮಾತನಾಡಿ, ನಗರದಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ, ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದಾರೆ. ಇನ್ನೂ ಸ್ಫೋಟದ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ಈಗಾಗಲೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹೊಗೆಯಾವರಿಸಿಕೊಂಡಿರುವುದು ಕಂಡುಬಂದಿದೆ.
ಇದಕ್ಕೂ ಮುನ್ನ ಸೆ.4ರಂದು ಕ್ವೆಟ್ಟಾದಲ್ಲಿ ನಡೆದ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದರು ಮತ್ತು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.ಇದನ್ನೂ ಓದಿ: RSSಗೆ 100 ವರ್ಷ – ನಾಳೆ ಪೋಸ್ಟ್ ಸ್ಟ್ಯಾಂಪ್, ನಾಣ್ಯ ಬಿಡುಗಡೆ ಮಾಡಲಿದ್ದಾರೆ ಪ್ರಧಾನಿ ಮೋದಿ
 
					
 
		 
		 
		 
		 
		 
		 
		 
		 
		