ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ಕೆಟ್ಟು ನಿಂತ ಪರಿಣಾಮ ಬೆಳಗ್ಗೆ 4 ಗಂಟಿಯಿಂದಲೂ ಟ್ರಾಫಿಕ್ ಜಾಮ್ ಉಂಟಾಗಿದೆ.
ಚಾರ್ಮಾಡಿಯ 3ನೇ ತಿರುವಿನಿಂದ ವಾಹನಗಳು 10 ಕಿ.ಮೀ.ನಷ್ಟು ದೂರ ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಭಾರತ್ ಬಂದ್ ಹಾಗೂ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಎಲ್ಲರೂ ತಮ್ಮ ಊರಿಗೆ ತೆರಳುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ವಾಹನ ದಟ್ಟಣೆ ಹೆಚ್ಚಳವಾಗಿದೆ.
Advertisement
Advertisement
ಈ ಘಾಟ್ ಮಂಗಳೂರು-ಬೆಂಗಳೂರು-ಧರ್ಮಸ್ಥಳ ಸಂಪರ್ಕಿಸುತ್ತಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
Advertisement
ಕೆಲ ದಿನಗಳ ಹಿಂದೆಯಷ್ಟೇ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ವೇಳೆ ಚಾರ್ಮಾಡಿಯಲ್ಲೇ ಎಲ್ಲಾ ವಾಹನಗಳು ಚಲಿಸುತ್ತಿದ್ದವು. ಲಘು-ಘನ ಎನ್ನದೇ ಎಲ್ಲಾ ವಾಹನಗಳು ಇದೇ ಮಾರ್ಗವಾಗಿ ಬೆಂಗಳೂರು ಸೇರುತ್ತಿದ್ದವು. ಈ ಹಿನ್ನೆಲೆಯಲ್ಲಿ ಹಲವು ದಿನಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಹಾಗೂ ವಾಹನ ಸವಾರರು ನರಕಯಾತನೆ ಅನುಭವಿಸಿದ್ದರು. ಸದ್ಯ ಶಿರಾಡಿ ಘಾಟ್ ಓಪನ್ ಆಗಿದ್ದು, ಲಘುವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv