ಭೋಪಾಲ್: ಭಾರತದ ತೇಜಾಜಿ ನಗರದ ನಿರ್ಮಾಣ ಹಂತದಲ್ಲಿರುವ ಶಾಲೆಯ ಮೇಲ್ಛಾವಣಿ ಕುಸಿದು ಹತ್ತು ಕಾರ್ಮಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.
ಈ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಸಂಭವಿಸಿದ್ದು, ಕಟ್ಟಡ ನಿರ್ಮಾಣ ಸ್ಥಳದಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಎಸ್‍ಡಿಆರ್‍ಎಫ್, ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ
Advertisement
Madhya Pradesh: Ten labourers were injured after the roof of an under-construction school collapsed in Tejaji Nagar area of Indore on Thursday evening. pic.twitter.com/xIPlqnsoMr
— ANI (@ANI) January 20, 2022
Advertisement
ಇದೀಗ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಅಧಿಕೃತ – ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭ