Recent News

ಕೆಎಸ್‍ಸಿಎ ವತಿಯಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ

ಬೆಂಗಳೂರು: ನೆರೆ ಸಂತ್ರಸ್ತರ ನೆರವಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್‍ಸಿಎ) ಮುಂದಾಗಿದ್ದು, ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ-20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ. ಇದಕ್ಕೂ ಮುನ್ನ ಸ್ಟೇಡಿಯಂನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಎಸ್‍ಸಿಎ ಅಧಿಕಾರಿಗಳು 10 ಲಕ್ಷ ರೂ. ಚೆಕ್ ನೀಡಿದರು. ಈ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೋಚ್ ರವಿಶಾಸ್ತ್ರಿ ಇದ್ದರು.

ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ಆಟಗಾರರು ಸ್ಟೇಡಿಯಂಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸ್ಟೇಡಿಯಂಗೆ ಪ್ರಯಾಣ ಬೆಳೆಸಿದರು. ಆದರೆ ಸಂಚಾರ ಅಸ್ತವ್ಯಸ್ತವಾಗಿದ್ದರಿಂದ ಸಿಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಎರಡು ಮೂರು ನಿಮಿಷಗಳ ಕಾಲ ಟ್ರಾಫಿಕ್‍ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಬಳಿಕ ಸ್ಟೇಡಿಯಂಗೆ ಆಗಮಿಸಿದ ಅವರನ್ನು ಆಡಳಿತ ಮಂಡಳಿ ಸ್ವಾಗತಿಸಿತು.

ಸಿಎಂ ಯಡಿಯೂರಪ್ಪ ಅವರು ವಿರಾಟ್ ಕೊಹ್ಲಿ ಹಾಗೂ ರವಿಶಾಸ್ತ್ರಿ ಅವರಿಗೆ ಧನ್ಯವಾದ ಹೇಳಿದರು. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬಿ.ಎಸ್. ಯಡಿಯೂರಪ್ಪನವರಿಗೆ ಸಾಥ್ ನೀಡಿದರು.

Leave a Reply

Your email address will not be published. Required fields are marked *