ಲಕ್ನೋ: 10 ತಿಂಗಳಿನ ಹೆಣ್ಣು ಮಗು ಮೇಲೆ ಮನೆಕೆಲಸದವನು ಅತ್ಯಾಚಾರ ಮಾಡಿರುವ ಪ್ರಕರಣ ಸಾದಾತ್ಗಂಜ್ನಲ್ಲಿ ಭಾನುವಾರ ನಡೆದಿರುವುದು ಬೆಳಕಿಗೆ ಬಂದಿದೆ.
ಮಗುವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ದಾಖಲಿಸಲಾಗಿದೆ. ಮಗುವಿನ ಜನನಾಂಗಕ್ಕೆ ಹಾನಿಯಾಗಿದ್ದು, ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ. ಆದಾಗ್ಯೂ, ಮೂತ್ರ ಮತ್ತು ಮಲ ವಿಸರ್ಜನೆ ಸಮಯದಲ್ಲಿ ಸ್ವಲ್ಪ ನೋವು ಇರುತ್ತದೆ. ಇದಕ್ಕಾಗಿ ಔಷಧಿ ನೀಡುತ್ತಿದ್ದೇವೆ. ಗುದದ್ವಾರದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಕಡಿಮೆಯಾದ ಬಳಿಕ ಅಗತ್ಯ ಬಿದ್ದರೆ ಶಸ್ತ್ರಚಿಕಿತ್ಸೆಯನ್ನು ಮಾಡಬೇಕಾಗುತ್ತದೆ ಎಂದು ಮಕ್ಕಳ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಪ್ರೊ ಜೆ.ಡಿ. ರಾವತ್ ತಿಳಿಸಿದ್ದಾರೆ. ಇದನ್ನೂ ಓದಿ: ಥ್ರೋಬಾಲ್ ಆಡಿ ಗಮನಸೆಳೆದ ನಟಿ ರೋಜಾ
ನಡೆದಿದ್ದೇನು: ಮಗುವಿನ ತಾಯಿಯು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಮಗ ಇದ್ದಕ್ಕಿದ್ದಂತೆ ಅಳುಲು ಪ್ರಾರಂಭಿಸಿದೆ. ಕೂಡಲೇ ಬೆಡ್ ರೂಂಗೆ ಬಂದು ನೋಡಿದಾಗ ಮನೆ ಕೆಲಸ ಮಾಡಿಕೊಂಡಿದ್ದ ಸನ್ನಿ ಮಗುವಿನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ. ಆಗ ಮಹಿಳೆಯನ್ನು ನೋಡುತ್ತಿದ್ದಂತೆ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಯ ಮಗುವಿನ ತಾತಿ ಕುಟುಂಬಸ್ಥರಿಗೆ ನಡೆದಿರುವ ವಿಚಾರವನ್ನು ತಿಳಿಸಿದ್ದಾಳೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಮಗುವಿನ ಕುಟುಂಬಸ್ಥರು ಪೊಲೀಸರಲ್ಲಿ ದೂರು ನೀಡಿದ್ದಾರೆ. ಕುಟುಂಬದ ದೂರಿನ ಮೇರೆಗೆ ಆರೋಪಿಯನ್ನು ಸೋಮವಾರ ಬಂಧಿಸಲಾಗಿದ್ದು, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾದತ್ಗಂಜ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಬ್ರಿಜೇಶ್ ಕುಮಾರ್ ಯಾದವ್ ತಿಳಿಸಿದ್ದಾರೆ.