ಮುಂಬೈ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 10 ಮಂದಿ ಸಜೀವ ದಹನಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
Advertisement
ಮಹಾರಾಷ್ಟ್ರದ ಅಹ್ಮದ್‍ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕೋವಿಡ್-19 ಚಿಕಿತ್ಸೆ ಪಡೆಯುತ್ತಿದ್ದ ಸುಮಾರು ಹತ್ತು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಮತ್ತು ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪುನೀತ್ ಸಾವಿನ ನಂತರ ಜಯದೇವ ಆಸ್ಪತ್ರೆ ರೋಗಿಗಳಲ್ಲಿ 30% ಹೆಚ್ಚಳ
Advertisement
Maharashtra | A total of 10 people died in a fire incident at Ahmednagar District Hospital, said District Collector Rajendra Bhosale pic.twitter.com/zrUnAMKNMj
— ANI (@ANI) November 6, 2021
Advertisement
ಘಟನೆ ಕುರಿತಂತೆ ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ, ಇದೀಗ ಉಳಿದಿರುವ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಒಟ್ಟು ಐಸಿಯು ವಾರ್ಡ್‍ನಲ್ಲಿ 17 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ 10 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಸತ್ತವರೆಲ್ಲರೂ ಕೋವಿಡ್-19ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿಯೇ ಮದುವೆಯಾಗಲು ಆಗಮಿಸಿದ ಪ್ರೇಮಿಗಳು
Advertisement
ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು, ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್