ಬೆಂಗಳೂರು: ಗ್ರಾಮದೇವತೆ ಮಾರಮ್ಮ ದೇವಿ ಜಾತ್ರೆಯಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು, ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯವಾಗಿರೋ ಘಟನೆ ನೆಲಮಂಗಲ ತಾಲೂಕಿನ ನರಸೀಪುರ ಗ್ರಾಮದಲ್ಲಿ ಸಂಭವಿಸಿದೆ.
Advertisement
ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮಾರಮ್ಮ ದೇವಿಗೆ ಸಡಗರ ಸಂಭ್ರಮದಿಂದ ಗ್ರಾಮಸ್ಥರು ಬೆಂಕಿಯ ಕೊಂಡವನ್ನ ಏರ್ಪಡಿಸಿದ್ದು, ಈ ವೇಳೆ ಆರತಿ ದೀಪದೊಂದಿಗೆ ಸೇವೆ ಸಲ್ಲಿಸುವಾಗ ಆಯತಪ್ಪಿ ಅವಘಡ ನಡೆದಿದೆ.
Advertisement
ಇದನ್ನೂ ಓದಿ: ವಿಡಿಯೋ: ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ದೇವರ ಪಲ್ಲಕ್ಕಿ ಹೊತ್ತ ಭಕ್ತ
Advertisement
ಗಾಯಗೊಂಡ ಸುಜಾತ, ಕವಿತಾ, ಲಕ್ಷ್ಮೀ, ಪವಿತ್ರ, ಜನಾರ್ದನ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಇದರಿಂದ ಗ್ರಾಮದಲ್ಲಿ ಆತಂಕದ ಛಾಯೆ ನಿರ್ಮಾಣವಾಗಿದ್ದು, ಡಾಬಸ್‍ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನ ನಡೆಸಿದ್ದಾರೆ.
Advertisement
ಘಟನೆ ನಡೆದ ಸಂದರ್ಭದಲ್ಲಿ ಚಿತ್ರೀಕರಣಕ್ಕೆ ತೆರಳಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಅಡ್ಡಿ ಪಡಿಸಿದ್ದು, ಇಲ್ಲಿ ಯಾವುದೇ ಅವಘಡ ನಡೆದಿಲ್ಲ. ಎಲ್ಲ ಸೃಷ್ಟಿ ಎಂದು ಸ್ಥಳೀಯರು ಸಮಜಾಯಿಷಿ ಹೇಳಿಕೆ ನೀಡಿದ್ದಾರೆ.