ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ಮಂಗಳವಾರ ಹಜಾಮ್ ಮೊಹಲ್ಲಾದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
Advertisement
10 ಪಿಸ್ತೂಲ್‍ಗಳು, 17 ಪಿಸ್ತೂಲ್ ಮ್ಯಾಗಜೀನ್‍ಗಳು, 54 ಪಿಸ್ತೂಲ್ ರೌಂಡ್‍ಗಳು ಮತ್ತು 5 ಗ್ರೆನೇಡ್‍ಗಳು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮಿಂದ ತಪ್ಪಾಗಿದೆ: ಕ್ಷಮೆ ಕೇಳಿದ ಶ್ರೀಲಂಕಾ ಅಧ್ಯಕ್ಷ
Advertisement
ಪೊಲೀಸರು ಮತ್ತು ಸೇನೆಯು ಉಗ್ರರ ಅಡಗುತಾಣವನ್ನು ಭೇದಿಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮೋದಿ, ಅಮಿತ್ ಶಾರನ್ನು ನಿಂದಿಸಿದ್ದ ವ್ಯಕ್ತಿ ಬಂಧನ
Advertisement
Advertisement
ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಗಡಿಯಾಚೆಯಿಂದ ಕಳ್ಳಸಾಗಣೆ ಮಾಡಿ ಆ ಪ್ರದೇಶದಲ್ಲಿ ಇರಿಸಲಾಗಿದೆ. ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರಾಗಿ ಹೊಸದಾಗಿ ಸೇರಿದವರಿಗೆ ಈ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಿತರಣೆ ಮಾಡಲು ಇಲ್ಲಿ ಸಂಗ್ರಹಿಸಿ ಇಡಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.