ಧಾರವಾಡ: ಸ್ವಾಮಿ ಅಯ್ಯಪ್ಪನ (Ayappa) ದರ್ಶನಕ್ಕೆಂದು ಕೇರಳಕ್ಕೆ ತೆರಳಿದ್ದ ಧಾರವಾಡದ (Dharwada) ಹತ್ತರ ಹರೆಯದ ಬಾಲಕನೋರ್ವ (Boy) ರಸ್ತೆ ಅಪಘಾತದಲ್ಲಿ (Accident) ಸಾವನ್ನಪ್ಪಿದ್ದಾನೆ.
ಧಾರವಾಡ ಸೈದಾಪುರದ ಸುಮಿತ್ ಪಾಂಡೆ (10) ಅಪಘಾತದಲ್ಲಿ ಮೃತಪಟ್ಟ ಬಾಲಕ. ಜ.1 ರಂದು ಸೈದಾಪುರದಿಂದ ಶಬರಿಮಲೆಗೆ ಟಾಟಾ ಏಸ್ ವಾಹನದಲ್ಲಿ ಅಯ್ಯಪ್ಪ ಮಾಲೆಧಾರಿಗಳು ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಕೇರಳದ ಮನಪುರಂನ ಯಡಪ್ಪಾಲ ಎಂಬಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ. ಇದನ್ನೂ ಓದಿ: ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ
ಸೂರಜ್ ಪಾಂಡೆ, ನಿಖಿಲ್ ಪಾಂಡೆ ಹಾಗೂ ಸುಶಾಂತ್ ಪಾಂಡೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಸುಮಿತ್ ಪಾಂಡೆ ಪಾರ್ಥಿವ ಶರೀರವನ್ನು ಧಾರವಾಡಕ್ಕೆ ತರುವ ವ್ಯವಸ್ಥೆ ಮಾಡಲಾಗುತ್ತಿದೆ. ಇದನ್ನೂ ಓದಿ: ದೆಹಲಿಯಲ್ಲಿ ಇನ್ನೊಂದು ಆಘಾತ – ಸ್ನೇಹ ಕೊನೆಗೊಳಿಸಲು ಬಯಸಿದ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ