ಮುಂಬೈ: ಬುರ್ಖಾ ಧರಿಸಿದ್ದ ಕಿಡ್ನ್ಯಾಪರ್ ಮಹಿಳೆಯಿಂದ ತನ್ನ ತಮ್ಮನ್ನನ್ನು 10 ವರ್ಷದ ಬಾಲಕ ಬೆನ್ನತ್ತಿ, ರಕ್ಷಿಸಿರುವ ಘಟನೆ ಮಹಾರಾಷ್ಟ್ರ ರಾಜಧಾನಿಯ ಥಾಣೆ ಪ್ರದೇಶದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಶುಕ್ರವಾರ ಮಧ್ಯಾಹ್ನ ಮುಂಬ್ರಾದ ಜರಿನಾ ಅಪಾರ್ಟ್‍ಮೆಂಟಿನ ಹೊರಗೆ ಮೂವರು ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ ಎರಡೂವರೆ ವರ್ಷದ ಮಗುವನ್ನು ಬುರ್ಖಾ ಧರಿಸಿದ್ದ ಅಪರಿಚಿತ ಮಹಿಳೆಯೊಬ್ಬಳು ಪುಸಲಾಯಿಸಿ ಎತ್ತಿಕೊಂಡಿದ್ದಾಳೆ. ನಂತರ ಮಗುವಿನೊಂದಿಗೆ ತೆರಳಿದ್ದಾಳೆ. ಇದನ್ನು ಕಂಡ 10 ವರ್ಷದ ಬಾಲಕ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ.
Advertisement
Advertisement
ಬಾಲಕ ಮಹಿಳೆಯನ್ನು ವಿಚಾರಿಸಿದಾಗ ಮಗುವಿಗೆ ಚಾಕೊಲೆಟ್ ಕೊಡಿಸಲು ಕರೆದುಕೊಂಡು ಬಂದಿರುವುದಾಗಿ ಹೇಳಿದ್ದಾಳೆ. ನಂತರ ಮಗುವಿನೊಂದಿಗೆ ಓಡಿ ಹೋಗಲು ಯತ್ನಿಸಿದ್ದಾಳೆ. ಇದರಿಂದ ಅನುಮಾನಗೊಂಡ ಬಾಲಕ ಓಡಿಹೋಗಿ ಮನೆಗೆ ವಿಷಯ ಮುಟ್ಟಿಸಿದ್ದಾನೆ. ಬಾಲಕನ ಮಾತನ್ನು ಕೇಳಿದ ಪೋಷಕರು ಹಾಗೂ ಅಕ್ಕ-ಪಕ್ಕದ ಜನರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಜನರು ತನ್ನತ್ತ ಓಡಿ ಬರುತ್ತಿರುವುದನ್ನು ಗಮನಿಸಿದ ಮಹಿಳೆ, ಕೂಡಲೇ ಮಗುವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾಳೆ.
Advertisement
ಈ ಕುರಿತು ಬಾಲಕನ ಚಿಕ್ಕಪ್ಪ ಮಾತನಾಡಿ, ಮದುವೆಯ ನಿಮಿತ್ತ ಬಾಲಕರು ತಮ್ಮ ಪೋಷಕರೊಂದಿಗೆ ಬಂದಿದ್ದರು. ಮನೆಯಲ್ಲಿ ಮದುವೆಯ ಸಿದ್ಧತೆಯಲ್ಲಿ ತೊಡಗಿದ್ದರಿಂದ ಮಕ್ಕಳ ಕಡೆ ಗಮನಹರಿಸಿರಲಿಲ್ಲ. ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ಅಪರಿಚಿತ ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ತಿಳಿಸಿದ್ದಾರೆ.
Advertisement
ಕಿಡ್ನ್ಯಾಪ್ ಕುರಿತು ಪ್ರತಿಕ್ರಿಯಿಸಿರುವ ಮುಂಬ್ರಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕಿಶೋರ್ ಪಸಾಲ್ಕರ್, ಅಪರಿಚಿತ ಮಹಿಳೆಯೊಬ್ಬಳು ಮಗುವನ್ನು ಅಪಹರಿಸುವ ವಿಫಲ ಯತ್ನ ನಡೆಸಿದ್ದರ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಗುವಿನ ಪೋಷಕರು ಯಾವುದೇ ದೂರು ನೀಡಿಲ್ಲ. ಆದರೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews