ಚಿಕ್ಕೋಡಿ: ಕೋಲ್ಕತ್ತಾದಲ್ಲಿ (Kolkata) ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್ (Supreme Court) ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಈ ಹೊತ್ತಿನಲ್ಲಿ ರಾಜ್ಯದಲ್ಲೂ ಸಹ ಅಮಾನವೀಯ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ.
10 ವರ್ಷ ವಯಸ್ಸಿನ ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು ಕೊಲೆಗೈದಿರುವ ಪೈಶಾಚಿಕ ಕೃತ್ಯ ನೆರೆಯ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿಗೆ ಸಮೀಪದಲ್ಲಿರುವ ಮಹಾರಾಷ್ಟ್ರದ (Maharashtra) ಕೊಲ್ಲಾಪುರ ಹೊರವಲಯದ ಶೇಯೇ ಪ್ರದೇಶದಲ್ಲಿ ಘಟನೆ ನಡೆದಿದ್ದು ಅತ್ಯಾಚಾರದ ವೇಳೆ ಬಾಲಕಿ ಚೀರಾಡಿದಕ್ಕೆ ಆಕೆಯನ್ನು ಕೊಲೆಗೈದು ಕಾಮುಕ ಪರಾರಿಯಾಗಿದ್ದ. ಇದನ್ನೂ ಓದಿ: ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು – ಶರಣ ಪ್ರಕಾಶ್ ಪಾಟೀಲ್
ಬಾಲಕಿ ತಾಯಿಯ ನಿಕಟ ಸಂಭಂಧಿಯಿಂದಲೇ ಅಪ್ರಾಪ್ತೆಯ ಅತ್ಯಾಚಾರ ಮತ್ತು ಕೊಲೆಯಾಗಿದೆ. ಕಳೆದ 3 ತಿಂಗಳಿನಿಂದ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಕಾಮುಕ, ಮೃತ ಬಾಲಕಿಯ ಮನೆಯಿಂದ ಕೆಲವೇ ಅಂತರದಲ್ಲಿರುವ ಹೊಲದಲ್ಲಿ ಕೃತ್ಯ ಎಸಗಿದ್ದಾನೆ.
ಅರೆಬೆತ್ತಲೆ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿ ಶವ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪ್ರಕರಣ ನಡೆದು ಐದೇ ಗಂಟೆಗಳಲ್ಲಿ ಆರೋಪಿಯನ್ನು ಕೊಲ್ಲಾಪುರ ಪೊಲೀಸರು (Kollapur Police) ಬಂಧಿಸಿದ್ದಾರೆ. ಪೊಲೀಸರ ಮುಂದೆ ಆರೋಪಿ ದಿನೇಶ್ ಕುಮಾರ್ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಅಪ್ರಾಪ್ತೆಯ ಪೋಷಕರು ಬಿಹಾರ ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಕೊಲ್ಹಾಪುರದ ಶಿರೋಳಿ MIDC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತ ಬಾಲಕಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: Kolkata Horror | ಮೆಡಿಕಲ್ ಕಾಲೇಜುಗಳಿಗೆ ಶೀಘ್ರವೇ ಮಾರ್ಗಸೂಚಿ ಪ್ರಕಟ – ಶರಣ ಪ್ರಕಾಶ್ ಪಾಟೀಲ್
ಇತ್ತೀಚೆಗೆ 10 ರೂಪಾಯಿ ನೀಡುವ ಆಮಿಷ ಒಡ್ಡಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ (Nipani) ಪಟ್ಟಣದಲ್ಲಿ ನಡೆದಿತ್ತು. ಇದನ್ನೂ ಓದಿ: ಕೊಡಗಿನಲ್ಲಿ ಅದ್ಧೂರಿಯಾಗಿ ನಡೆಯಿತು ಕಿರಣ್ ಅಬ್ಬಾವರಂ ಡೆಸ್ಟಿನೇಷನ್ ವೆಡ್ಡಿಂಗ್