ನವದೆಹಲಿ: 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು (Delhi Police) ಬಂಧಿಸಿರುವ ಘಟನೆ ಇಲ್ಲಿನ ಮೌಜ್‌ಪುರ ಪ್ರದೇಶದ ಮಸೀದಿಯಲ್ಲಿ (Delhi Mosque) ನಡೆದಿದೆ. ಕಳೆದ 2 ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿ ಮೊಹಮ್ಮದ್ ಅರ್ಮಾನ್ ಎಂದು ಗುರುತಿಸಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಬಂಧಿಸಿದ್ದು ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ (POCSO Act) ಹಾಗೂ ಐಪಿಸಿ (IPC) ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾವೇನಾದರೂ ಸಿಡಿದೆದ್ದರೆ ನೀವು ಉಳಿಯುವುದಿಲ್ಲ – ಕಾಂಗ್ರೆಸ್‍ಗೆ ಮುತಾಲಿಕ್ ವಾರ್ನಿಂಗ್
ಕೆಲ ಕಿಡಿಗೇಡಿಗಳು ಮೌಜ್‌ಪುರ ಪ್ರದೇಶದಲ್ಲಿರುವ ಮಸೀದಿಗೆ ಬಂದಿದ್ದರು. ಅವರು ಮಸೀದಿಯೊಳಗೆ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ನವೆಂಬರ್ 9 ರಂದು, ಬಾಲಕಿ ತನ್ನ ತರಗತಿ ಮುಗಿದ ನಂತರ ಮಸೀದಿಗೆ ಭೇಟಿ ನೀಡಿದ್ದಳು. ಆಕೆ ಒಂಟಿಯಾಗಿರುವುದು ಕಂಡು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.