ಲಕ್ನೋ: ಶಾಲೆಯಲ್ಲಿ ಬಿಸ್ಕೆಟ್ ತಿಂದು ಸುಮಾರು 100 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಜಿಲ್ಲೆಯ ಉತ್ತರ ಪ್ರದೇಶದ ರಾಯಾ ಪ್ರದೇಶದಲ್ಲಿ ಬುಧವಾರ ನಡೆದಿದೆ.
ಅಸ್ವಸ್ಥಗೊಂಡ ಮಕ್ಕಳು ರಾಯಾ ಪ್ರದೇಶದ ದೀನ್‍ದಯಾಳ್ ಸರ್ಕಾರಿ ವಸತಿ ಶಾಲೆಗೆ ಸೇರಿದವರಾಗಿದ್ದು, ಬುಧವಾರ ಸಂಜೆ ಮಕ್ಕಳಿಗೆ ಬಿಸ್ಕೆಟ್ ನೀಡಲಾಗಿದೆ. ಮಕ್ಕಳು ಬಿಸ್ಕೆಟ್ ತಿಂದು ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡಿದೆ. ತಕ್ಷಣ ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ಶಾಲಾ ಸಿಬ್ಬಂದಿ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಆಸ್ಪತ್ರೆಗೆ ದಾಖಲಾಗಿರುವ ಎಲ್ಲಾ ಮಕ್ಕಳೂ 10-14 ವರ್ಷದೊಳಗಿನವರಾಗಿದ್ದು, 100 ಮಕ್ಕಳ ಪೈಕಿ 45 ಮಕ್ಕಳ ಸ್ಥಿತಿ ಗಂಭೀರವಾಗಿದೆ. ಇನ್ನುಳಿದ 55 ಮಕ್ಕಳನ್ನು ಪರೀಕ್ಷಿಸಲಾಗುತ್ತಿದೆ ಎಂದು ವೈದ್ಯಕೀಯ ಅಧಿಕಾರಿ ಸತೀಶ್ ಸಿಂಗ್ ಅವರು ಹೇಳಿದ್ದಾರೆ.
Advertisement
ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ಘಟನೆಗೆ ಖಚಿತ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ ಎಂದು ಜಿಲ್ಲಾಧಿಕಾರಿ ವಿಶಾಕ್ ಜಿ ಹೇಳಿದ್ದಾರೆ.