ಚಿಕ್ಕಮಗಳೂರು: ಈವರೆಗೂ ನನ್ನನ್ನ ಯಾರು ಆ ರೀತಿ ಸಂಪರ್ಕ ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಆಫರ್ ಆರೋಪಕ್ಕೆ ಚಿಕ್ಕಮಗಳೂರು (Chikkamagaluru) ಶಾಸಕ ತಮ್ಮಯ್ಯ ಸ್ಪಷ್ಟನೆ ನೀಡಿದ್ದಾರೆ.
ರವಿ ಗಣಿಗ ಹೇಳಿಕೆಗೆ ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಶಾಸಕ ತಮ್ಮಯ್ಯ ಮಾತನಾಡಿ, ನನಗೆ ಈವರೆಗೂ ಯಾರೂ ಸಂಪರ್ಕ ಮಾಡಿಲ್ಲ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಶಾಸಕನಾಗಿದ್ದೇನೆ. ಸಿದ್ದರಾಮಯ್ಯ (Siddaramaih), ಖರ್ಗೆ, ಡಿಕೆಶಿ ನೇತೃತ್ವದಲ್ಲಿ 5 ವರ್ಷ ಸರ್ಕಾರ ಆಳಲು ಜನ ನನ್ನನ್ನು ಗೆಲ್ಲಿಸಿದ್ದಾರೆ. ರವಿ ಗಣಿಗ ಏನು ಮಾತಾಡಿದ್ದಾರೆ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ಇದರಲ್ಲಿ ನನ್ನ ಹೆಸರು ಏಕೆ ಬಂತು ಎಂದು ನನಗೆ ಗೊತ್ತಿಲ್ಲ. ಈವರೆಗೂ ನನ್ನನ್ನ ಯಾರು ಆ ರೀತಿ ಸಂಪರ್ಕ ಮಾಡಲಿಲ್ಲ. ನಾನು 18 ವರ್ಷ ಬಿಜೆಪಿಯಲ್ಲಿ ಇದ್ದೆ. ಬಿಜೆಪಿಯವರು ಸಿಕ್ಕಿದಾಗ ಆತ್ಮೀಯವಾಗಿ ಮಾತನಾಡುತ್ತಾರೆ ಅಷ್ಟೇ ಬಿಟ್ರೆ ಬೇರೆ ಯಾರೂ ನನ್ನನ್ನು ಸಂಪರ್ಕ ಮಾಡಲಿಲ್ಲ. ಅವರನ್ನೇ ಕೇಳಬೇಕು ಎಂದು ಹೇಳಿದರು. ಇದನ್ನೂ ಓದಿ: ದನ ಮೇಯಿಸಲು ಹೋಗಿ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕರು – ಓರ್ವನ ಶವ ಪತ್ತೆ
Advertisement
Advertisement
ಗಣಿಗ ರವಿ ಹೇಳಿದ್ದೇನು?
ಸರ್ಕಾರ ಕೆಡವಲು ಬಿಜೆಪಿಯಿಂದ (BJP) 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ ನೀಡಿದ್ದಾರೆ. ಇದಕ್ಕೂ ಮುನ್ನ ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಬಿಜೆಪಿಯನ್ನು ಇಬ್ಬರು ಕಾಂಗ್ರೆಸ್ ಶಾಸಕರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ಆಪರೇಷನ್ ಕಮಲದ ಸಾಕ್ಷಿ ಬಿಡುಗಡೆ ಮಾಡುತ್ತೇನೆ. ಬಿಜೆಪಿ-ಜೆಡಿಎಸ್ ಸರ್ಕಾರ ಬೀಳಿಸುವ ತವಕದಲ್ಲಿದ್ದಾರೆ. ಕಾಂಗ್ರೆಸ್‌ನ 50 ಶಾಸಕರಿಗೆ ಆಮಿಷ ಒಡ್ಡಲಾಗಿದೆ. ಕಾಂಗ್ರೆಸ್ ಶಾಸಕರು 50 ಕೋಟಿ ರೂ.ಗೆ ಬಗ್ಗಿಲ್ಲ ಎಂದು ಶಾಸಕರಿಗೆ ತಲಾ 100 ಕೋಟಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಜಗಳ- ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ
Advertisement
Advertisement
ಕಳೆದ ಸರ್ಕಾರದಲ್ಲಿ ಲೂಟಿ ಮಾಡಿರುವ ಹಣದಿಂದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಪ್ಲಾನ್ ಮಾಡಿದೆ. ಕೆಲವರು ಪೆನ್‌ಡ್ರೈವ್ ತೋರಿಸಿ ರಿವಿಲ್ ಮಾಡಿಲ್ಲ, ನಾವು ತೋರಿಸಿದರೆ ಖಂಡಿತ ರಿವಿಲ್ ಮಾಡುತ್ತೇವೆ. ನಮ್ಮ ಬಳಿ ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳಿವೆ. ಕಿತ್ತೂರು ಶಾಸಕ ಬಾಬು, ಚಿಕ್ಕಮಗಳೂರು ಶಾಸಕ ತಮ್ಮಯ್ಯರನ್ನ ಯಾಕೆ ಸಂಪರ್ಕಿಸಿದ್ದರು? ಯಾವ್ಯಾವ ಹೋಟೆಲ್, ಏರ್‌ಪೋರ್ಟ್, ಗೆಸ್ಟ್ ಹೌಸ್‌ನಲ್ಲಿ ಸಂಪರ್ಕಿಸಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಆಡಿಯೋ, ವಿಡಿಯೋ, ಸಿಡಿ, ಪೆನ್‌ಡ್ರೈವ್ ಸೇರಿದಂತೆ ಮುಂದುವರಿದು ಐ ಕ್ಲೌಡ್ ಕೂಡ ಇದೆ ಎಂದರು. ಇದನ್ನೂ ಓದಿ: ಬಿಜೆಪಿಯಿಂದ 50 ಕೋಟಿ ಅಲ್ಲ 100 ಕೋಟಿ ರೂ. ಆಫರ್ : ಗಣಿಗ ರವಿ
ನಮ್ಮ ಶಾಸಕರನ್ನ ಎಲ್ಲೆಲ್ಲಿ ಸಂಪರ್ಕಿಸಿದ್ದರು? ಏನೇನು ಆಫರ್ ಮಾಡಿದ್ದರು? ಎನ್ನುವುದನ್ನು ಶೀಘ್ರದಲ್ಲೇ ಮಾಧ್ಯಮಗಳ ಮೂಲಕ ದಾಖಲೆ ಬಿಡುಗಡೆ ಮಾಡುತ್ತೇವೆ. ಸರ್ಕಾರ ಕೆಡವಲು ಪ್ರಯತ್ನಿಸದವರು ಈ ಬಗ್ಗೆ ತನಿಖೆ ಮಾಡಿಸಿ ಎನ್ನುತ್ತಾರೆ. ಪ್ರಯತ್ನದಲ್ಲಿರುವವರು ಯಾರು ತನಿಖೆ ಮಾಡಿಸಿ ಎನ್ನುವುದಿಲ್ಲ. ನಮ್ಮ ಶಾಸಕರರು ಬಿಜೆಪಿ ಆಮಿಷಗಳಿಗೆ ಬಲಿಯಾಗಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ, ಸರ್ಕಾರವೂ ಸ್ಥಿರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ ಮೇಲೆ ಕ್ಷಿಪಣಿ ದಾಳಿಗೆ ಅಮೆರಿಕ ಒಪ್ಪಿಗೆ – ಉಕ್ರೇನ್‌ಗೆ ಜೋ ಬೈಡನ್ ಬಲ