ಬೆಂಗಳೂರು: ರಾಜ್ಯದ ಕೆರೆಗಳಲ್ಲಿ ಮುಂಗಾರು ಮಳೆಯ ನೀರಿನ ಸಂಗ್ರಹಣಾ ಸಾಮರ್ಥ್ಯವನ್ನ ವೃದ್ಧಿಸುವ ನಿಟ್ಟಿನಲ್ಲಿ SDMFನಿಂದ 100 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ಮೊದಲ ಹಂತದಲ್ಲಿ 93 ಕೆರೆಗಳನ್ನ ಅಭಿವೃದ್ದಿಪಡಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು (N.S.Boseraju) ತಿಳಿಸಿದರು.
ಇಂದು ವಿಕಾಸಸೌಧದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. 2023 ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆಯಿಂದ ರಾಜ್ಯದಲ್ಲಿ ಉಂಟಾದ ಜಲಕ್ಷಾಮದಿಂದ ಸುಮಾರು 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಈ ಬಾರಿ ಮುಂಗಾರು ಒಳ್ಳೆಯ ರೀತಿಯಲ್ಲಿ ಮಳೆಯನ್ನು ತರುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಕೆರೆಗಳಲ್ಲಿ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ನೀರು ಪೋಲಾಗದಂತೆ ತಡೆಯಲು ಸಣ್ಣ ನೀರಾವರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನೂ ಓದಿ: ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಕೇಂದ್ರ ಸಚಿವರು
Advertisement
Advertisement
ಪರಿಶೀಲನೆ ನಡೆಸಿ ಸರ್ಕಾರ SDMFನಿಂದ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಹಣದಲ್ಲಿ ಕೆರೆಗಳ ಅಭಿವೃದ್ಧಿಪಡಿಸಿ, ಕೆರೆಗಳಲ್ಲಿ ನೀರು ಶೇಖರಣೆ ಮಟ್ಟವನ್ನು ಹೆಚ್ಚಿಸಿ ರೈತರಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
Advertisement
Advertisement
ಮೊದಲ ಹಂತದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 93 ಕೆರೆಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು. ಈಗಾಗಲೇ 93 ಕೆರೆಗಳನ್ನು ಇಲಾಖೆ ಗುರುತಿಸಿದ್ದು, ಕ್ರಿಯಾಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಅನುಷ್ಠಾನಗೊಳಿಸಿದಲ್ಲಿ ಮುಂಬರುವ ದಿನಗಳಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವವನ್ನು ತಡೆಯಲು ಸಹಾಯಕವಾಗಲಿದೆ. ಹಾಗೆಯೇ ಮಳೆ ನೀರು ಕೆರೆಗಳಿಗೆ ಸರಾಗವಾಗಿ ಹರಿದು ನೀರು ಶೇಖರಣೆ ಗರಿಷ್ಠ ಮಟ್ಟದಲ್ಲಿ ಆಗುವಂತೆ ಮಾಡಲು ಕಾರ್ಯಯೋಜನೆಯನ್ನು ಸಿದ್ಧಪಡಿಸಿ ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ