ಪೂನಂ ಪಾಂಡೆಗೆ 100 ಕೋಟಿ ರೂ. ಮಾನನಷ್ಟ ಸಂಕಷ್ಟ

Public TV
1 Min Read
poonam Pandey 1 2

ರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ (Poonam Pandey) ಮಾನನಷ್ಟ ಸಂಕಷ್ಟ ಎದುರಾಗಿದೆ. ಈಕೆ ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆ‍ಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.

poonam Pandey 2 1

ಇದಷ್ಟೇ ಅಲ್ಲದೇ,  ಮೊನ್ನೆಯಷ್ಟೇ ಪೂನಂ ಪಾಂಡೆ ಮೇಲೆ ಎಫ್.ಐ.ಆರ್ (F.I.R) ದಾಖಲಾಗಿದೆ. ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

poonam pandey 1

ಈ ಪ್ರಕರಣದ ಕುರಿತಂತೆ ಪೂನಂ ಮೇಲೆ  ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು. ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.

 

ತನ್ನ ತಾಯಿ ಕೂಡ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳು ಹೇಗೆ ನರಳುತ್ತಾರೆ ಎನ್ನುವುದನ್ನು ಸ್ವತಃ ನಾನು ನೋಡಿದ್ದೇನೆ. ಸದ್ಯ ತಾಯಿ ಆರೋಗ್ಯವಾಗಿದ್ದಾರೆ. ಅವರ ನೋವನ್ನು ನೋಡಿಯೇ ನಾನು ಗರ್ಭಕಂಠ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಬೇಕು ಅಂತ ನಿರ್ಧಾರ ಮಾಡಿದ್ದು. ನೀವು ಟೀಕೆಗಳನ್ನು ಮಾಡುತ್ತಿದ್ದೀರಿ. ಆದರೆ, ನಾನು ಮಾಡಿದ್ದರ ಹಿಂದಿನ ಪರಿಣಾಮವನ್ನೂ ನೀವು ಗಮನಿಸಬೇಕು ಎಂದು ಅವರು ಪೋಸ್ಟ್ ಮಾಡಿದ್ದಾರೆ.

Share This Article